ಪ್ರವಾಹ : ಬಾಕಿ ಪರಿಹಾರ ಬಿಡುಗಡೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ

ಅತಿವೃಷ್ಟಿ : ಜಿಲ್ಲೆಯ ಜನಪ್ರತಿನಿಧಿಗಳ ಜತೆ ಸಭೆ

0
🌐 Belgaum News :

 

ಅತಿವೃಷ್ಟಿ : ಜಿಲ್ಲೆಯ ಜನಪ್ರತಿನಿಧಿಗಳ ಜತೆ ಸಭೆ

ಬೆಳಗಾವಿ : ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ.‌ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಅತಿವೃಷ್ಟಿ/ ಪ್ರವಾಹ ಕುರಿತ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ವಾರದಿಂದ ದಾಖಲೆ ಪ್ರಮಾಣದ ಮಳೆಯಾಗಿದೆ. ರಾಜ್ಯದ ಅಧಿಕಾರಿಗಳು ಮಹಾರಾಷ್ಟ್ರದ ಜತೆ ನಿರಂತರ ಸಂಪರ್ಕದಲ್ಲಿದ್ದು, ಪ್ರವಾಹ‌ ನಿರ್ವಹಣೆ ಕುರಿತು ನಿಗಾ ವಹಿಸಲಾಗಿದೆ.

2-3 ದಿನಗಳಲ್ಲಿ ಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಪರಿಸ್ಥಿತಿ ನಿರ್ವಹಣೆಗೆ ಸರಕಾರದಿಂದ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಬಾಕಿ ಪರಿಹಾರ ಬಿಡುಗಡೆಗೆ ಸೂಚನೆ:

ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ಮನೆಹಾನಿಯ ಬಾಕಿ ಪರಿಹಾರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ 113 ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿರುವುದರಿಂದ ಜನರ ತುರ್ತು ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗಾಗಿ 89 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಜನರ ಕಷ್ಟಗಳನ್ನು ಅರಿತುಕೊಂಡು ಜಿಲ್ಲಾಡಳಿತ ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಪರಿಹಾರ ಕಾರ್ಯದಲ್ಲಿ ತೊಡಕು ಉಂಟಾದರೆ ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ನಿರ್ದೇಶನ ನೀಡಿದರು.

1200 ಕೋಟಿ ಹಾನಿ ; ತಕ್ಷಣವೇ 170 ಕೋಟಿ ಬಿಡುಗಡೆಗೆ ಮನವಿ :

ಬೆಳಗಾವಿ ವಿಭಾಗದಲ್ಲಿ 1400 ಕಿ.ಮೀ. ರಸ್ತೆ ಹಾನಿಯಾಗಿದೆ. 305 ಸೇತುವೆ ಹಾನಿ ಸೇರಿ ಒಟ್ಟಾರೆ 1200 ಕೋಟಿ ರೂಪಾಯಿ ಹಾನಿಯಾಗಿದ್ದು, ತಕ್ಷಣ ದುರಸ್ತಿಗೆ 170 ಕೋಟಿ ಬಿಡುಗಡೆ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಸಚಿವ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

ಪ್ರವಾಹ ಸಂದರ್ಭದಲ್ಲಿ ಕೊಚ್ಚಿ ಹೋಗಿರುವ ಜಾನುವಾರುಗಳ ಕುರಿತು ಸ್ಥಳೀಯವಾಗಿ ಮಾಹಿತಿ ಸಂಗ್ರಹಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು.

NDRF ಅನುದಾನ ಹೆಚ್ಚಳಕ್ಕೆ ಮನವಿ:

ಸಭೆಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ ಅವರು, ಪ್ರವಾಹ ಸಂದರ್ಭದಲ್ಲಿ ತುರ್ತು ಔಷಧಿ ಮತ್ತಿತರ ಸಾಮಗ್ರಿಗಳನ್ನುNDRF ಅನುದಾನದಲ್ಲಿ ಖರೀದಿಸಬೇಕು ಎಂದು ಸೂಚನೆ ನೀಡಿದರು.

NDRF  ಹೊರತುಪಡಿಸಿ ಉಳಿದ ಹೆಚ್ಚಿನ ಅನುದಾನ ಅಗತ್ಯವಿದೆ ಎಂಬುದರ ಬಗ್ಗೆ ಪ್ರಸ್ತಾವ ಸಲ್ಲಿಸಬೇಕು. ಎನ್.ಡಿ.ಆರ್.ಎಫ್. ಅನುದಾನ ಹೆಚ್ಚಿಸುವಂತೆ ಕೋರಿ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಕುಡಚಿ ಮತಕ್ಷೇತ್ರದ ಶಿರವಾರ ಹಾಗೂ ಗುಂಡವಾಡ ಗ್ರಾಮಗಳ 350 ಕ್ಕೂ ಅಧಿಕ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆಶ್ರಯ ಮನೆಗಳನ್ನು ಒದಗಿಸಬೇಕು ಎಂದು ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ‌.ರಾಜೀವ್ ಮನವಿ ಮಾಡಿಕೊಂಡರು.

ಕುಸಿದ 1200ಕ್ಕೂ ಹೆಚ್ಚು ಮನೆಗಳು :

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಒಂದು ವಾರದಿಂದ ಮಳೆ ಜಾಸ್ತಿಯಾಗಿದೆ. ಶೇ.60 ರಷ್ಟು ಅಧಿಕ‌ ಮಳೆಯಾಗಿದೆ. ಮೂರು ಜನರು‌ ಮೃತಪಟ್ಟಿರುತ್ತಾರೆ. ಪೂರ್ಣ 40 ಮತ್ತು ಭಾಗಶಃ 1200 ಕ್ಕೂ ಅಧಿಕ ಮನೆಗಳು ಕುಸಿದಿವೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಅನೇಕ ಕಡೆಗಳಲ್ಲಿ ಬೆಳೆ ಜಲಾವೃತಗೊಂಡಿರುತ್ತದೆ. ಒಂದು ವಾರದಲ್ಲಿ ಜಂಟಿ ಸಮೀಕ್ಷೆ ನಡೆಸಿ ಹಾನಿಯ ಮಾಹಿತಿಯನ್ನು ಕಲೆಹಾಕಲಾಗುವುದು ಎಂದು ವಿವರಿಸಿದರು. 37 ಸೇತುವೆ ಸ್ಥಗಿತಗೊಂಡಿವೆ. ಆದರೆ ಖಾನಾಪುರ ತಾಲ್ಲೂಕಿನ ಎರಡು ಸೇತುವೆ ಹೊರತುಪಡಿಸಿ ಉಳಿದ ಕಡೆ ಪರ್ಯಾಯ ಮಾರ್ಗಗಳಿವೆ ಎಂದು ತಿಳಿಸಿದರು.

ಡಿಸಿಎಂ ಲಕ್ಷ್ಮಣ ಸವದಿ, ಜವಳಿ ಮತ್ತು ಕೈಮಗ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ, ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ  ಮಹಾಂತೇಶ ಕವಟಗಿಮಠ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಶಾಸಕರಾದ ಮಹಾಂತೇಶ ದೊಡ್ಡಗೌಡ್ರ, ಲಕ್ಷ್ಮೀ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ಅನಿಲ್ ಬೆನಕೆ , ಮಹಾಂತೇಶ ಕೌಜಲಗಿ, ಅಭಯ್ ಪಾಟೀಲ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ, ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಸಾಯಬಣ್ಣ ತಳವಾರ, ಕಾಡಾ ಅಧ್ಯಕ್ಷ ವಿ.ಐ.ಪಾಟೀಲ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');