ಬೆಳಗಾವಿ ಸೇರಿ ರಾಜ್ಯದ 8 ಜಿಲ್ಲೆಯಲ್ಲಿ ಜುಲೈ 28ರವೆಗೆ ಭಾರಿ ಮಳೆ

0
🌐 Belgaum News :

ಬೆಂಗಳೂರು : ಜುಲೈ 28ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಬೆಳಗಾವಿ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ 8 ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರಬೇಕು. ಇನ್ನು ಜು.25, 26ರಂದು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ​ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇನ್ನೂ 2 ದಿನ ಭಾರಿ ಮಳೆ ಸಾಧ್ಯತೆ ಇದೆ. ರಾಜ್ಯ ಸರ್ಕಾರ ನಿನ್ನೆ ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಗೆ ಒಟ್ಟು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಅಂತಾ ತಿಳಿಸಿದೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');