ಕನ್ನಡದ ಹಿರಿಯ ನಟಿ ‘ಅಭಿನಯ ಶಾರದೆ’ ಜಯಂತಿ ಇನ್ನಿಲ್ಲ

0
🌐 Belgaum News :

 

                ಸ್ಯಾಂಡಲ್ ವುಡ್ ಹಿರಿಯ ನಟಿ,                

 

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ( 76 ) ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ .

ಜಯಂತಿ ಅವರು ಒಟ್ಟು ಆರು ಭಾಷೆಗಳಲ್ಲಿ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ . ವರನಟ ಡಾ . ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು .

ಕನ್ನಡ , ತೆಲುಗು , ತಮಿಳು , ಮಲಯಾಳಂ , ಹಿಂದಿ ಭಾಷೆಗಳಲ್ಲಿ ಜಯಂತಿ ನಟಿಸಿದ್ದರು . 1968 ರಲ್ಲಿ ತೆರೆ ಕಂಡ ವೈ , ಅರ್ , ಸ್ವಾಮಿ ನಿರ್ದೇಶನದ ‘ ಜೇನು ಗೂಡು ‘ ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದ ಜಯಂತಿಯವರ ಮೂಲ ಹೆಸರು’ ಕಮಲ ಕುಮಾರಿ.ಅದಕ್ಕಿಂತ ಮುನ್ನ ‘ ಜಗದೇಕ ವೀರನ ಕಥೆ ‘ ಚಿತ್ರದಲ್ಲಿ ಸಣ್ಣ ಪಾತ್ರ ವೊಂದರಲ್ಲಿ ಅಭಿನಯಿಸಿದ್ದಾರೆ.

ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಿರ್ಮಾಪಕಿಯೂ ನಿರ್ದೇಶಕಿಯೂ ಆಗಿರುವ ಇವರು 1965 ‘ ಮಿಸ್ ಲೀಲಾವತಿ ‘ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.

‘ಎರಡು ಮುಖ ‘ ( 1969 ) , ಮನಸ್ಸಿನಂತೆ ಮಾಂಗಲ್ಯ ‘ ( 1976 ) , ‘ ಧರ್ಮ ದಾರಿ ತಪ್ಪಿತು ‘ ( 1981 ) , ಮಸಣದ ಹೂವು ( 1985 ) , ‘ ಆನಂದ್ ‘ ( 1989 ) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ.ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಕಾಮತೃಷೆಯಿಂದ ಬಳಲುವ ಹೆಣ್ಣಾಗಿ ಮೊದಲ ಭಾರಿಗೆ ವಿಶಿಷ್ಟ ಅಭಿನಯ ನೀಡಿದ್ದಾರೆ .

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');