ದಿಲ್ಲಿಯಿಂದ ಯಾವುದೇ ಒತ್ತಡ ಇಲ್ಲ; ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ: ಯಡಿಯೂರಪ್ಪ

0
🌐 Belgaum News :

 

ಇವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ನಾನು ಹೇಳಿಲ್ಲ; ಹೈಕಮಾಂಡ್ ತೀರ್ಮಾನ ಮಾಡುತ್ತದೆ

ಬೆಂಗಳೂರು: ರಾಜೀನಾಮೆ ನೀಡುವಂತೆ ದಿಲ್ಲಿಯಿಂದ ನನಗೆ ಯಾವುದೇ ಒತ್ತಡ ಇಲ್ಲ. ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿ ಯಾರ ಒತ್ತಡವೂ ಇಲ್ಲ ಎಂದರು.

ಇವರನ್ನೇ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬ ಯಾವುದೇ ಹೆಸರನ್ನು ಹೈಕಮಾಂಡ್ ಗೆ ಸೂಚಿಸಿಲ್ಲ. ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಮುಂದೆ ಮುಖ್ಯಮಂತ್ರಿಯಾಗುವವರಿಗೆ ನಾನು ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಹೇಳಿದರು.

ರಾಜ್ಯಪಾಲ ಹುದ್ದೆ ನೀಡಿದರೂ ನಾನು ಅಲಂಕರಿಸುವುದಿಲ್ಲ. ನಾನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವುದೇ ನನ್ನ ಗುರಿ ಎಂದರು.

ರಾಜ್ಯದ ಜನರು ಯಾವುದೇ ಗೊಂದಲಕ್ಕೊಳಗಾಗಬಾರದು, ಮುಂದಿನ ಮುಖ್ಯಮಂತ್ರಿಗೂ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');