ಟ್ರ್ಯಾಕ್ಟರ್ ಚಲಾಯಿಸಿಕೊಂಡು ಸಂಸತ್ ಗೆ ಬಂದ ರಾಹುಲ್ ಗಾಂಧಿ!

0
🌐 Belgaum News :

ಹೊಸದಿಲ್ಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್ ನಾಯಕ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಸಂಸತ್ ಗೆ ಪ್ರವೇಶಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಸ್ವತಃ ರಾಹುಲ್ ಗಾಂಧಿ ಟ್ರ್ಯಾಕ್ಟರ್ ಓಡಿಸುತ್ತಾ ಸಂಸತ್ ಪ್ರವೇಶಿಸಿರುವುದು ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಸುದ್ದಿಯಾಗಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ನಾನು ರೈತರ ಧ್ವನಿಯಾಗಿ ಬಂದಿದ್ದೇನೆ. ಕೇಂದ್ರ ಸರ್ಕಾರ ರೈತರನ್ನು ತಡೆಯುವ ಪ್ರಯತ್ನ ಮಾಡುತ್ತಿದೆ. ಅವರ ಧ್ವನಿಯನ್ನು ನಿಗ್ರಹಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕೃಷಿ ಕಾನೂನುಗಳ ಬಗ್ಗೆ ಯಾವುದೇ ರೀತಿಯಲ್ಲಿ ಚರ್ಚೆಗೆ ಮುಂದಾಗುತ್ತಿಲ್ಲ. ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರ ದಿವ್ಯ ನಿರ್ಲಕ್ಷ್ಯದ ಧೋರಣೆ ಹೊಂದಿದೆ ಎಂದು ಗುಡುಗಿದರು.

2019 ರಿಂದ ಪ್ರತಿಭಟನೆ ನಡೆಸುತ್ತಿರುವ ರೈತರು:

ಇನ್ನು, 2019 ರ ನವೆಂಬರ್ ನಿಂದ ರಾಷ್ಟ್ರ ರಾಜಧಾನಿಯ ಎಲ್ಲಾ ಗಡಿ ಪ್ರದೇಶಗಳಲ್ಲಿ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರದೊಂದಿಗೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿದ್ದರೂ ಕೂಡ ಕೇಂದ್ರ ಸರ್ಕಾರ ರೈತರ ಮಾತಿಗೆ ಒಪ್ಪುತ್ತಿಲ್ಲ ಮಾತ್ರವಲ್ಲದೇ, ರೈತರು ಕೇಂದ್ರಕ್ಕೆ ಒಪ್ಪಿ ನಡೆಯುವುದಕ್ಕೆ ತಯಾರಿಲ್ಲ. ಒಟ್ಟಿನಲ್ಲಿ ಕಳೆದೊಂದು ಒಂದುವರೆ ವರ್ಷಗಳಿಂದ ಜಿದ್ದಾಜಿದ್ದಿನ ಚರ್ಚೆಗಳಂತೆ ಆಗುತ್ತಿದ್ದು, ಇನ್ನೂ ಬಗೆಹರಿಯದೇ ಉಳಿದಿರುವ ಸಮಸ್ಯೆಯಾಗಿದೆ.

ಕಳೆದ ವಾರ ರಾಷ್ಟ್ರೀಯ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಹಾಗೂ ಅವರ ಬೆಂಬಲಿಗರು ಹಾಗೂ ಇತರೆ ಪ್ರತಿಪಕ್ಷಗಳು ಸಂಸತ್ ಭವನದ ಆವರಣದೊಳಗಿರುವ ಗಾಂಧಿ ಪ್ರತಿಮೆಯ ಎದುರುಗಡೆ ಪ್ರತಿಭಟನೆ ಮಾಡಿದ್ದರು.

ಈಗ ಮತ್ತೆ ಮುಂಗಾರು ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಕೃಷಿ ಕಾಯ್ದೆಯ ವಿಚಾರ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಸೇರಿ ಇತರೆ ಪ್ರತಿಪಕ್ಷಗಳು ಕೂಡ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಮಾಡುತ್ತಿವೆ.

ಕಳೆದ ವಾರ, ಜಂತರ್ ಮಂತರ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ದ ನೇತೃತ್ವದಲ್ಲಿ ಸುಮಾರು ಇನ್ನೂರು ಮಂದಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿದ್ದು, ಅಧಿವೇಶನ ಮುಗಿಯವೆರೆಗೆ ಪ್ರತಿಭಟನೆ ಮುಂದುವರಿಸುತ್ತೇವೆ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');