ವಿವಿಧ ವಸತಿ ಶಾಲೆಗಳ ದಾಖಲಾತಿಗಾಗಿ ಅರ್ಜಿ ಆಹ್ವಾನ

0
🌐 Belgaum News :

ಬೆಳಗಾವಿ, ಜು.27: 2021-22ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಹಾಗೂ ಇತರೆ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶ ಪರೀಕ್ಷೆ ಮತ್ತು ಆನ್‍ಲೈನ್ ಕೌನ್ಸಿಲಿಂಗ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಿದೆ.

ಪ್ರಸ್ತುತ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪಾಲಕ/ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು ಜುಲೈ 28, 2021 ರಿಂದ ಅಗಷ್ಟ್ 10, 2021 ರವರೆಗೆ ಅವಶ್ಯಕ ದಾಖಲೆಗಳೊಂದಿಗೆ ತಮ್ಮ ಹತ್ತಿರದ ವಸತಿ ಶಾಲೆಗಳ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

100 ಅಂಕದ ಪರೀಕ್ಷೆ ಸೆಪ್ಟೆಂಬರ್ 16, 2021 ರಂದು ಬೆಳಗ್ಗೆ 11.:00ರಿಂದ ಮಧ್ಯಾಹ್ನ 01:00 ಗÀಂಟೆಯವರಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');