ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

0
🌐 Belgaum News :

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ಘೋಷಣೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

ಇಂದು ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರವೇ (ನಾಳೆ) ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.


ಸಭೆಯಲ್ಲಿ ಬೊಮ್ಮಾಯಿ ಹೆಸರು ಪ್ರಸ್ತಾಪ:

ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಬೆಂಗಳೂರಿನ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಹೆಸರನ್ನು ಪ್ರಸ್ತಾಪಿಸಲಾಗಿದೆ.

ಬೊಮ್ಮಾಯಿ ಕಿರು ಪರಿಚಯ:

ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮಗನಾದ ಬಸವರಾಜ ಬೊಮ್ಮಾಯಿ ಜನತಾ ಪರಿವಾರದಿಂದ ರಾಜಕಾರಣ ಆರಂಭಿಸಿ ಬಿಜೆಪಿಗೆ ಬಂದವರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಬೊಮ್ಮಾಯಿ, ಮೂರು ಬಾರಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');