ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ: ಪರಿಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

0
🌐 Belgaum News :

ಬೆಳಗಾವಿ, ಜು.28 : ಬೆಳಗಾವಿ ನಗರದಲ್ಲಿ ಜುಲೈ 30, 31 ಮತ್ತು ಅಗಸ್ಟ್ 01 ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜರುಗಲಿರುವ ವಿವಿಧ ಗ್ರೂಪ್-ಎ ಮತ್ತು ಗ್ರೂಪ್-ಬಿ ತಾಂತ್ರಿಕ/ ತಾಂತ್ರಿಕೇತರ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆಗಳ ಕಾಲಕ್ಕೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸಿಆರ್‍ಪಿಸಿ 1973 ಕಲಂ 144 ಪ್ರಕಾರ ನಿಷೇಧಾಜ್ಞೆ ಯನ್ನು ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಡಾ.ವಿಕ್ರಮ ಅಮಟೆ ಆದೇಶ ಹೊರಡಿಸಿದ್ದಾರೆ.

ನಗರದ ಮರಾಠಿ ವಿದ್ಯಾನಿಕೇತನ ಹೈಸ್ಕೂಲ್ ಕ್ಯಾಂಪ್, ಉಷಾತಾಯಿ ಗೊಗಟೆ ಗಲ್ರ್ಸ್ ಹೈಸ್ಕೂಲ್ ಪಾಟೀಲ ಗಲ್ಲಿ ಮತ್ತು ಮಹಿಳಾ ವಿದ್ಯಾಲಯ ಮಂಡಲ್ಸ್ ಇಂಗ್ಲಿಷ್ ಮಿಡಿಯಂ ಶಾಲೆ ಕಾಲೇಜು ರಸ್ತೆ ಹಾಗೂ ಮಾಡೆಲ್ ಇಂಗ್ಲಿಷ್ ಮಿಡಿಯಂ ಸ್ಕೂಲ್, ಬಿ. ಕೆ ಮಾಡಲ್ ಹೈಸ್ಕೂಲ್ ಕ್ಯಾಂಪ್ ಶಾಲೆಗಳಲ್ಲಿ ಪರೀಕ್ಷೆ ಜರುಗಲಿದ್ದು, ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತ ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಕೆಳಕಾಣಿಸಿದ ಪ್ರತಿಬಂಧಗಳೊಂದಿಗೆ ನಿಷೇಧಾಜ್ಞೆ ಹೊರಡಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಸುತ್ತ ಹೊರಡಿಸಲಾಗಿರುವ ಪ್ರತಿಬಂಧಗಳು :
ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದಿಂದ ಹೊರಡಿಸಲಾಗಿರುವ ಕೊವಿಡ್-19 ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವದು, ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ಸುತ್ತಳತೆಯಲ್ಲಿ

ಪರಿಕ್ಷಾರ್ಥಿಗಳು ಪರೀಕ್ಷಾ ಸಿಬ್ಬಂದಿ ಜನರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರು, ಪಾಲಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲ ಜೆರಾಕ್ಸ ಕೇಂದ್ರ/ ಕಂಪ್ಯೂಟರ್/ ಸೈಬರ್ ಸೆಂಟರಗಳನ್ನು ಕಡ್ಡಾಯವಾಗಿ ಮುಚ್ಚುವದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಸಭೆ/ಸಮಾರಂಭಗಳು ನಡೆಯದಂತೆ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.

ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಧ್ವನಿವರ್ಧಕಗಳನ್ನು ಉಪಯೋಗಿಸುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖನ ಕೊಡುವುದು ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೈತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಈ ಆಜ್ಞೆಯು ಅಂತ್ಯಕ್ರಿಯೆ ಮೆರವಣಿಗೆಗಳಿಗೆ ಮತ್ತು ಇನ್ನಿತರ ಕಾರಣಗಳಿಗಾಗಿ ಅನುಮತಿ ಪಡೆದು ತೆಗೆಯಿಸಲಾದ ಮೆರವಣಿಗೆಗಳಿಗೆ ಅನ್ವಯಿಸುವದಿಲ್ಲ. ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ಧ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮವನ್ನು ಜರುಗಿಸಲು ಸಂಬಂಧಪಟ್ಟ ಪಿ.ಐ ರವರಿಗೆ ಅನುಮತಿ ನೀಡಲಾಗಿದೆ ಎಂದು ಉಪ ಪೊಲೀಸ್ ಆಯಕ್ತರು (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಡಾ. ವಿಕ್ರಮ ಅಮಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');