ಪ್ರವಾಹ ಸಂತ್ರಸ್ತರಿಗೆ ಭರ್ಜರಿ ಊಟದ ಸಿದ್ದತೆ

0
🌐 Belgaum News :
ಬೆಳಗಾವಿ  : ಅಥಣಿ: ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಗೆ ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು ಕೃಷ್ಣಾ ನದಿ ತೀರದ ಅಥಣಿ ತಾಲೂಕಿನ ಇಪ್ಪತ್ತೆರಡು ಗ್ರಾಮಗಳು ಪ್ರವಾಹ ಪೀಡಿತವಾಗಿವೆ.ಸಾವಿರಾರು ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದು ಕಾಳಜಿ ಕೇಂದ್ರಗಳಲ್ಲಿ ಆಸರೆ ಪಡೆದಿದ್ದಾರೆ.
ಸದ್ಯ ಪ್ರವಾಹ ಸಂತ್ರಸ್ತರಿಗೆ ಪೌಷ್ಟಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಅಥಣಿ ತಾಲೂಕು ಆಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.ಅಥಣಿ ತಾಲೂಕಿನ ಕಾಳಜಿ ಕೇಂದ್ರಗಳಲ್ಲಿ ದನಕರುಗಳಿಗೆ ಮೇವು ಮತ್ತು ಸಂತ್ರಸ್ತ ಜನರಿಗೆ ಕಳೆದ ಎರಡು ದಿನಗಳಿಂದ ತಾತ್ಕಾಲಿಕ ವ್ಯವಸ್ಥೆ ಮಾಡಿದ್ದ ತಾಲೂಕು ಆಡಳಿತದಿಂದ ಅನ್ನ ಸಾಂಬಾರ ವ್ಯವಸ್ಥೆ ಮಾಡಲಾಗಿತ್ತು ಸದ್ಯ ಒಂಭತ್ತು ಸಾವಿರಕ್ಕೂ ಅಧಿಕ ಕುಟುಂಬಗಳನ್ನು
 
 ಸ್ಥಳಾಂತರಿಸಲಾಗಿದ್ದು ಚಪಾತಿ ಪಲ್ಯ ಮತ್ತು ಅನ್ನ ಸಾಂಬಾರ ಕೊಡುವಂತೆ ಬೆಳಗಾವಿ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಮತ್ತು ಚಿಕ್ಕೋಡಿ ಉಪವಿಭಾಗಾಧಿಕಾರಿ ಯುಕೇಶಕುಮಾರ ಅವರ ಸೂಚನೆ ಮೆರೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಉಪತಹಶಿಲ್ದಾರ ಮಹದೇವ ಬಿರಾದಾರ ತಿಳಿಸಿದ್ದಾರೆ.
ಈ ವೇಳೆ ಮಲಿಕಾರ್ಜನ ಮಿರ್ಜಿ, ತಮ್ಮಣ್ಣ ಖಲಾಟಿ,ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು
📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');