5 ಲಕ್ಷ ಸುಲಿಗೆ : ಇನ್‌ಸ್ಪೆಕ್ಟರ್, ಪಿಎಸ್‌ಐಗಳ ಅಮಾನತು

0
🌐 Belgaum News :

ಬೆಂಗಳೂರು : ಪ್ರಕರಣವೊಂದರಲ್ಲಿ ಆರೋಪಿಯಿಂದ 10 ಲಕ್ಷಕ್ಕೆ ಬೇಡಿಕೆ ಇಟ್ಟು, 5 ಲಕ್ಷ ಪಡೆದಿದ್ದಾರೆ ಎಂಬ ಆರೋಪದಡಿ ವೈಟ್ ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆಯ ಇನ್ ಸ್ಪೆಕ್ಟರ್ ಸೇರಿ ನಾಲ್ವರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನೆಪದಲ್ಲಿ ಆರೋಪಿಗೆ ಕಿರುಕುಳ ನೀಡಿದ್ದ ಪೊಲೀಸರು, ಅವರಿಂದ ಹಣ ಸುಲಿಗೆ ಮಾಡಿದ್ದರು. ಬೇಸತ್ತ ಆರೋಪಿ, ಆಡಿಯೊ ರೆಕಾರ್ಡಿಂಗ್ ಸಮೇತ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದ್ದರು.

ಇನ್‌ಸ್ಪೆಕ್ಟರ್ ರೇಣುಕಾ, ಸಬ್ ಇನ್‌ಸ್ಪೆಕ್ಟರ್‌ಗಳಾದ (ಪಿಎಸ್‌ಐ) ನವೀನ್, ಗಣೇಶ್ ಹಾಗೂ ಕಾನ್‌ಸ್ಟೆಬಲ್ ಹೇಮಂತ್ ವಿರುದ್ಧ ಜುಲೈ ೨೦ರಂದು ಎಫ್‌ಐಆರ್ ದಾಖಲಾಗಿತ್ತು. ಪ್ರಾಥಮಿಕ ತನಿಖೆ ನಡೆಸಿದ್ದ ಎಸಿಬಿ ಪೊಲೀಸರು, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹಾಗೂ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ವರದಿ ನೀಡಿದ್ದರು.

ಎಸಿಬಿ ವರದಿ ಪರಿಶೀಲಿಸಿದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಇನ್‌ಸ್ಪೆಕ್ಟರ್ ರೇಣುಕಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪಿಎಸ್‌ಐಗಳಾದ ನವೀನ್, ಗಣೇಶ್ ಹಾಗೂ ಕಾನ್‌ಸ್ಟೆಬಲ್ ಹೇಮಂತ್ ಅವರನ್ನು ಕಮಿಷನರ್ ಅಮಾನತು ಮಾಡಿದ್ದಾರೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');