ಶಾಸಕ ಎಂ.ಪಿ. ರೇಣುಕಾಚಾರ್ಯಗೂ ಸಿಡಿ ಭೀತಿ: ಪ್ರಸಾರಕ್ಕೆ ತಡೆ ಕೋರಿ ಕೋರ್ಟ್ ಮೊರೆ

0
🌐 Belgaum News :

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ನಂತರ, ಇದೀಗ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯಗೂ ಸಿಡಿ ರಿಲೀಸ್ ಭೀತಿ ಶುರುವಾಗಿದೆ ಎನ್ನಲಾಗಿದೆ.

ಇದೇ ಕಾರಣದಿಂದಾಗಿ ತಮ್ಮ ವಿರುದ್ಧದ ಯಾವುದೇ ಸುದ್ದಿ, ವೀಡಿಯೋ ದೃಶ್ಯಾವಳಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

ಈಗಾಗಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ನಿಂದಾಗಿ, ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಉಂಟಾಗಿತ್ತು. ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ಕೂಡ ಕೊಡುವಂತೆ ಆಯ್ತು. ಇದಾದ ಬಳಿಕ, ಈಗ ಹೊನ್ನಾಳಿಯ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಿಡಿ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ.

ಈ ಸುಳಿವನ್ನು ಅರಿತಿರುವಂತ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು, ತಮ್ಮ ವಿರುದ್ಧದ ಯಾವುದೇ ವೀಡಿಯೋ, ವರದಿ, ಪತ್ರಿಕೆ, ದೃಶ್ಯಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ, ಮಧ್ಯಂತರ ತಡೆಯಾಜ್ಞೆಯನ್ನು ತಂದಿದ್ದಾರೆ.

ಸಿಡಿ ಇದೆ ಎಂದು ಯಾರಾದರು ರೇಣುಕಾಚಾರ್ಯ ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರಾ? ಅಥವಾ ಸಿಡಿ ಬಿಡುಗಡೆಯಾಗಬಹುದು ಎಂಬ ಕಾರಣದಿಂದ ಅವರು ತಡೆಯಾಜ್ಞೆ ತಂದಿದ್ದಾರೊ ಎಂಬುದನ್ನು ರೇಣುಕಾಚಾರ್ಯ ಸ್ಪಷ್ಟಪಡಿಸಿಲ್ಲ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');