ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

0
🌐 Belgaum News :

ಚಿಕ್ಕಮಗಳೂರು:   ಆಹಾರ ಅರಸಿ ಬಂದಿರುವ ಕಾಡಾನೆಗೆ,  ಜಮೀನಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನ ಮಲ್ಲೇನಹಳ್ಳಿ ಸಮೀಪ ಗಾಳಿ ಪೂಜೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಲಾಗಿದ್ದರಿಂದ ಘಟನೆ ಎದುರಾಗಿದೆ  ಎಂದು ಅರಣ್ಯ ಅಧಿಕಾರಿಗಳು ಪರಿಶೀಲನೆ ಬಳಿಕ ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಇಲಾಖೆ ಸಿಬ್ಬಂದಿ ಜಮೀನಿನ ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ. ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಈ ಭಾಗದಲ್ಲಿ ಬೆಳೆ ರಕ್ಷಣೆಗೆಂದು ಜನೀನಿನ ಬೇಲಿಗೆ ಅಕ್ರಮವಾಗಿ ವಿದ್ಯುತ್ ಹರಿಸುವುದು ಸಾಮಾನ್ಯವಾಗಿದ್ದು, ಕಳೆದ ಏಳೆಂಟು ತಿಂಗಳ ಹಿಂದಷ್ಟೇ ಇದೇ ರೀತಿ ಅಕ್ರಮವಾಗಿ ಎಳೆಯಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಆನೆಯೊಂದು ಮೃತಪಟ್ಟಿತ್ತು. ಅಕ್ರಮವಾಗಿ ವಿದ್ಯುತ್ ತಂತಿ ಎಳೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜನತೆ ಒತ್ತಾಯಿಸಿದ್ದಾರೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');