ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ೫ ಲಕ್ಷ ಪರಿಹಾರ : ಸಿಎಂ ಘೋಷಣೆ

0
🌐 Belgaum News :

ಬೆಂಗಳೂರು: ಭಾರಿ ಮಳೆ, ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ೫ ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ನೆರೆ ಸಂಕಷ್ಟ ವಿಚಾರವಾಗಿ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬೊಮ್ಮಾಯಿ ಬಳಿಕ ಮಾತನಾಡಿ, ಮಳೆ ಕಡಿಮೆಯಾದರೂ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ನೀರು ತುಂಬಿಕೊಂಡಿದ್ದು, ನೀರು ಹಾಗೆಯೇ ನಿಂತಿದ್ದು, ಅನೇಕ ಪ್ರದೇಶಗಳು ಜಲಾವೃತಗೊಂಡಿದೆ.

ಇದರಿಂದಾಗಿ 466 ಗ್ರಾಮಗಳಲ್ಲಿ ಸಮಸ್ಯೆಯಾಗಿದೆ. ಮಳೆಯಿಂದ ಶೇ.೭೫ರಷ್ಟು ಭಾಗ ಮನೆಕಳೆದುಕೊಂಡವರಿಗೆ ೫ ಲಕ್ಷ ಹಾಗೂ ರ‍್ಧ ಮನೆ ಕಳೆದುಕೊಂಡವರಿಗೆ ೩ ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಬೆಳೆ ಹಾನಿ ಸಮೀಕ್ಷೆ ನಡೆಸಿ ೧೫ ದಿನಗಳಲ್ಲಿ ವರದಿ ನೀಡಬೇಕು ಹಾಗೂ ಮನೆ ಹಾನಿಯಾದವರಿಗೆ ತಕ್ಷಣ 10,000 ಪರಿಹಾರ ವಿತರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');