ಮಾಜಿ ಪ್ರಧಾನಿ ದೇವೇಗೌಡರಿಗೆ ಭೇಟಿಯಾಗಿ ಆಶೀರ್ವಾದ ಪಡೆದ ನೂತನ ಸಿಎಂ

0
🌐 Belgaum News :

ಬೆಂಗಳೂರು : ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ, ಚರ್ಚೆ ನಡೆಸಿದರು.

ಇಲ್ಲಿನ ಪದ್ಮನಾಭನಗರದಲ್ಲಿನ ದೇವೇಗೌಡರ ನಿವಾಸಕ್ಕೆ ಸಿಎಂ ತೆರಳಿ , ಮಾಜಿ ಪ್ರಧಾನಿ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಸಿಎಂಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನ ಮಾಡಿದರು.

ಬಳಿಕ ಮಾತನಾಡಿ, ಜನತಾಪರಿವಾದಲ್ಲಿದ್ದಾಗಿನ ಒಡನಾಟ, ಹಳೆ ನೆನಪುಗಳನ್ನು ಮೆಲುಕು ಹಾಕಿದರು. ಸಿಕ್ಕಿರುವ ಅವಕಾಶ ಸಮರ್ಥವಾಗಿ ಬಳಸಿಕೊಂಡು, ರಾಜ್ಯಕ್ಕೆ ಉತ್ತಮವಾಗಿ ಆಡಳಿತ ನೀಡುವಂತೆ ಮಾಜಿ ಪ್ರಧಾನಿ ಮಾರ್ಗದರ್ಶನ ನೀಡಿದರು .ಸಿಎಂ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ ನೀಡಿದ್ದರು.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');