ಮಹಾಂತೇಶ ಕವಟಗಿಮಠ ಸೇವೆ ಸ್ಮರಿಸಿ, ಸಂಪುಟದಲ್ಲಿ ಸ್ಥಾನ ನೀಡಿ:-ಪ್ರಮೋದ ಕೊಚೇರಿ

0
🌐 Belgaum News :

 

ಬೆಳಗಾವಿ:-ಬೊಮ್ಮಾಯಿ ಸಂಪುಟದಲ್ಲಿ ಮಹಾಂತೇಶ ಕವಟಗಿಮಠ ಅವರಿಗೆ ಸಚಿವ ಸ್ಥಾನ ನೀಡುವಂತೆ ಖಾನಾಪುರ ಬಿಜೆಪಿ ಘಟಕ ಒತ್ತಾಯಿಸಿದೆ.
ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಸಂಪುಟ ರಚನೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಖಾನಾಪುರ ತಾಲ್ಲೂಕಿನ ಬಿಜೆಪಿ ಮುಖಂಡ ಪ್ರಮೋದ ಕೊಚೇರಿ ಸೇರಿದಂತೆ ಹಲವು ಮುಖಂಡರು ಆಗ್ರಹಿಸಿದ್ದಾರೆ.

ಖಾನಾಪುರ ಪಟ್ಟಣದಲ್ಲಿ ನಡೆದ ಖಾನಾಪುರ ಭಾಗದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಒಕ್ಕೊರಲ ಅಭಿಪ್ರಾಯ ವ್ಯಕ್ತವಾಯಿತು. ನೂತನವಾಗಿ ರಚನೆಯಾಗಲಿರುವ ತಮ್ಮ ನೇತೃತ್ವದ ಸಚಿವ ಸಂಪುಟದಲ್ಲಿ ಮಹಾಂತೇಶ ಕವಟಗಿಮಠ ಅವರಿಗೆ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಗ್ರಹಿಸಿದರು.

ಈ ವೇಳೆ ಬಿಜೆಪಿ ಮುಖಂಡ ಪ್ರಮೋದ ಕೊಚೇರಿ ಮಾತನಾಡಿ, ತಳಮಟ್ಟದ ರಾಜಕಾರಣಿಯಾಗಿ ಗ್ರಾಮ ಪಂಚಾಯತಿ ಮೂಲಕ ವಿಧಾನ ಪರಿಷತ್‍ಗೆ ಆಯ್ಕೆಯಾಗಿರುವ ಮಹಾಂತೇಶ ಕವಟಗಿಮಠ ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಮಾಡಿದ ಸೇವೆ ಅನನ್ಯವಾದುದಾಗಿದೆ ಅಲ್ಲದೆ ಅಭಿವೃದ್ಧಿ ಪರ ಯೋಜನೆಗಳ ಮೂಲಕ ಅವರು ಖಾನಾಪುರ ಭಾಗದಲ್ಲಿ ರೈತರು, ಸಾರ್ವಜನಿಕರಿಗೆ ಹಲವು ರೀತಿಯಲ್ಲಿ ನೆರವಾಗಿದ್ದಾರೆ. ಅಂಥವರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಇನ್ನಷ್ಟು ಹೆಚ್ಚಿನ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಇದೇ ವೇಳೆ ಬಿಜೆಪಿ ಮುಖಂಡ ಸಂಜಯ್ ಕೋಬಲ್ ಮಾತನಾಡಿ, ಅಭಿವೃದ್ಧಿಪರ, ಜನಪರ ಕಾರ್ಯಕ್ರಮಗಳ ಮೂಲಕ ಜನಪ್ರೀಯತೆಯನ್ನು ಸಂಪಾದಿಸಿರುವ ಮಹಾಂತೇಶ ಕವಟಗಿಮಠ ಅವರಿಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ‌ಜಿಲ್ಲಾ ಉಪಾಧ್ಯಕ್ಷರು ಪ್ರಮೋದ್ ಕೊಚೇರಿ ಮಂಡಲ,ಅಧ್ಯಕ್ಷರು ಸಂಜಯ್ ಕೋಬಲ್ ಮಂಡಲ ಪ್ರಧಾನ ಕಾರ್ಯದರ್ಶಿಗಳು ಗುಂಡು ತೋಪಿನಕಟ್ಟಿ ಬಸವರಾಜ್ ಸನಿಕೊಪ್ ಸೇರಿದಂತೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');