ಕ್ರೀಡಾಪಟುಗಳಿಂದ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

0
🌐 Belgaum News :

ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾ ಪಟುಗಳಿಗೆ 2020ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅರ್ಜಿಗಳನ್ನು ಆಗಸ್ಟ 23 ರ ಒಳಗಾಗಿ  ಉಪನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಬೆಳಗಾವಿ ಈ ಕಚೇರಿಗೆ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹತೆಗಳು: ಕಳೆದ 5 ವರ್ಷಗಳ ಕ್ರೀಡಾ ಸಾಧನೆಯನ್ನು ಪರಿಗಣಿಸಲಾಗುವುದು, ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ ಹಾಗೂ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಕರ್ನಾಟಕವನ್ನು 5 ವರ್ಷ ಪ್ರತಿನಿಧಿಸಿದ ಭಾರತದ ನಿವಾಸಿಯಾದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಕರ್ನಾಟಕದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಇಂತಹ ಸಂದರ್ಭದಲ್ಲಿ ಕನಿಷ್ಠ ಒಂದು ವರ್ಷ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರಲೇಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ  ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಕಚೇರಿಯ ದೂರವಾಣಿ: 0831-2474101 ಗೆ ಸಂಪರ್ಕಿಸಬಹುದು.

ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ:
ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಲ್ಲಿ ಕ್ರೀಡಾಪಟುಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಿದ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಕ್ರೀಡಾ ಪೋಷಕರಿಗೆ 2021-22ನೇ ಸಾಲಿನ ಕರ್ನಾಟಕ “ಕ್ರೀಡಾ ಪೋಷಕ ಪ್ರಶಸ್ತಿ”ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆಗಳು: ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೆÇೀಷಕರು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಕರ್ನಾಟಕ ನಿವಾಸಿಗಳಲ್ಲದ ಹಾಗೂ ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ತೊಡಗಿಸದೇ ಇರುವ ಕ್ರೀಡಾ ಪೋಷಕರುಗಳು ಈ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ ಮತ್ತು ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಬಗ್ಗೆ ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್ ಕಡ್ಡಾಯವಾಗಿ ಸಲ್ಲಿಸಬೇಕು.

ಅರ್ಹ ಕ್ರೀಡಾ ಪೋಷಕರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಬೆಳಗಾವಿ ಈ ಕಚೇರಿಗೆ ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಸಲು ಆ.23 ಕೊನೆಯ ದಿನಾಂಕವಾಗಿರುತ್ತದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಳಗಾವಿ ಕಚೇರಿಯ ದೂರವಾಣಿ ಸಂಖ್ಯೆ: 0831-2474101 ನ್ನು  ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನ:
ಬೆಳಗಾವಿ: ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

2020ನೇ ಸಾಲಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕ್ರೀಡಾಪಟುಗಳು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.

ಕರ್ನಾಟಕವನ್ನು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಭಾರತವನ್ನು ಅಧಿಕೃತವಾಗಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅಂಗೀಕೃತ ಕ್ರೀಡಾ ಸಂಸ್ಥೆಗಳಿಂದ/ಜಿಲ್ಲೆಗಳ ಉಪ ನಿರ್ದೇಶಕರು/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,/ಕರ್ನಾಟಕ ಕ್ರೀಡಾ ಪ್ರಾಧಿಕಾರದ ಶಿಫಾರಸ್ಸಿನೊಂದಿಗೆ ಸಲ್ಲಿಸಬೇಕು.

ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಆಗಸ್ಟ 23 ರ ಒಳಗಾಗಿ ಉಪ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಳಗಾವಿ ಇವರಿಗೆ ಸಲ್ಲಿಸಬೇಕು. ಆಗಸ್ಟ 23 ರ ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ವಿವರಗಳಿಗಾಗಿ ಬೆಳಗಾವಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 0831-2474101 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');