ದಾವಣಗೆರೆ: ಇಂದಿನಿಂದ ಆ.16 ರವರೆಗೆ ಜಿಲ್ಲೆಯಾಧ್ಯಂತ ನೈಟ್ ಕರ್ಪ್ಯೂ ಜಾರಿ

0
🌐 Belgaum News :

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ, ಜಿಲ್ಲೆಯಾದ್ಯಂತ ಇಂದಿನಿಂದ ಆಗಸ್ಟ್ 16ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ.

ಈ ಕುರಿತಂತೆ ದಾವಣಗೆರೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಂಡು ಬಂದ ಹಿನ್ನಲೆಯಲ್ಲಿ, ನಿಯಂತ್ರಣ ಕ್ರಮವಾಗಿ ನೈಟ್ ಕರ್ಪ್ಯೂ ಜಾರಿಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.

ಇಂದಿನಿಂದ ಜಿಲ್ಲೆಯಾದ್ಯಂತ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿ ಇರಲಿದೆ. ತುರ್ತು ಸಂದರ್ಭದಲ್ಲಿ ಮಾತ್ರವೇ ಸಾರ್ವಜನಿಕರ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಒಂದು ವೇಳೆ ಅನಗತ್ಯವಾಗಿ ಓಡಾಡಿದ್ರೇ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');