ಫಲಿತಾಂಶ ತಿರಸ್ಕರಿಸಿದ 965 ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ

0
🌐 Belgaum News :

ಬೆಂಗಳೂರು:  ಜು.20 ರಂದು ದ್ವಿತಿಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ತಿರಸ್ಕರಿಸಿದ 965 ವಿದ್ಯಾರ್ಥಿಗಳು ಇದೀಗ ಮತ್ತೆ ಪರೀಕ್ಷೆ ಬರೆಯಲಿದ್ದಾರೆ.

ಕೊರೋನಾ ಹಿನ್ನೆಲೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಪಾಸ್ ಮಾಡಿತ್ತು. ಎಸ್‌ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನು ಪರಿಶೀಲಿಸಿದ ಈ ಬಾರಿ ಫಲಿತಾಂಶ ಪ್ರಕಟ ಮಾಡಲಾಗಿತ್ತು.

ಇದರ ಜೊತೆಗೆ ಪಿಯು ಬೋರ್ಡ್ ಮಾಹಿತಿಯೊಂದನ್ನು ನೀಡಿತ್ತು. ಫಲಿತಾಂಶ ಒಪ್ಪಿಕೊಳ್ಳುವುದು ಕಡ್ಡಾಯವಲ್ಲ, ಫಲಿತಾಂಶ ತಿರಸ್ಕರಿಸಿದವರು ಪರೀಕ್ಷೆ ಬರೆಯಬಹುದು ಎನ್ನಲಾಗಿತ್ತು. ಆಗಸ್ಟ್ 19 ರಂದು ಪಿಯುಸಿ ಪರೀಕ್ಷೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, 965 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');