ಮಹಾರಾಷ್ಟ್ರ ರಾಜ್ಯದಲ್ಲಿ ಮಹಾಮಾರಿ ಕೊರೋನಾ 3 ನೇ ಅಲೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕದ ಗಡಿ ಭಾಗದಲ್ಲಿರುವ ಕಾಗವಾಡ ಚೆಕ್ ಪೋಸ್ಟ್‍ದಲ್ಲಿ ತಪಾಸಣೆ

0
🌐 Belgaum News :

ಶೇಡಬಾಳ ;- ಮಹಾರಾಷ್ಟ್ರ ರಾಜ್ಯದಲ್ಲಿ ಮಹಾಮಾರಿ ಕೊರೋನಾ 3 ನೇ ಅಲೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕದ ಗಡಿ ಭಾಗದಲ್ಲಿರುವ ಕಾಗವಾಡ ಚೆಕ್ ಪೋಸ್ಟ್‍ದಲ್ಲಿ ತಪಾಸಣೆ ಕಾರ್ಯವನ್ನು ಚುರುಕುಗೊಳಿಸಲಾಗಿದ್ದು, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರನ್ನು ಕಡ್ಡಾಯವಾಗಿ ತಪಾಸಿಸಿ ನೆಗೆಟಿವ್ ಪಾಸ್ ಹೊಂದಿದವರನ್ನು ಮಾತ್ರ ರಾಜ್ಯಕ್ಕೆ ಪ್ರವೇಶ ನೀಡಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಕೋವಿಡ್ ಎರಡನೇ ಅಲೆಯೇ ಇನ್ನೂ ಪೂರ್ಣ ಪ್ರಮಾಣದಲ್ಲಿ ತಗ್ಗಿಲ್ಲ. ಅಷ್ಟರಲ್ಲಿಯೇ 3 ನೇ ಅಲೆಯ ಭೀತಿ ಎದುರಾಗಿದ್ದು, ನೆರೆಯ ಗಡಿ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿರುವ 3 ನೇ ಅಲೆ ಮಹಾರಾಷ್ಟ್ರಕ್ಕೂ ಕಾಲಿಟ್ಟಿದ್ದು, ಜಿಲ್ಲಾಧಿಕಾರಿಯ ಆದೇಶದಂತೆ ಕಾಗವಾಡ ತಾಲೂಕಾಡಳಿತ, ಆರೋಗ್ಯ ಇಲಾಖೆ ಹಾಗೂ ಪೋಲಿಸ್ ಇಲಾಖೆದವರು ಜಂಟಿಯಾಗಿ ಚೆಕ್ ಪೋಸ್ಟ್‍ದಲ್ಲಿ ತಪಾಸಣೆ ಕಾರ್ಯ ಕೈಗೊಂಡಿದ್ದಾರೆ.

ಮಹಾರಾಷ್ಟ್ರದ ಗಡಿ ಕಾಗವಾಡದ ರಾಜ್ಯ ಹೆದ್ದಾರಿ ಚೆಕ್ ಪೋಸ್ಟ್‍ಗೆ ಬ್ಯಾರಿಕೆಡ್ ಹಾಕಿಸಿ ನೆರೆಯ ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಆಗಮಿಸುವ ಪ್ರಯಾಣಿಕರನ್ನು ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಪಡೆದವರು ಮಾತ್ರ ಪ್ರಯಾಣಿಸಲು ಅವಕಾಶ ನೀಡುತ್ತಿದ್ದಾರೆ.
ಕರ್ನಾಟಕದ ನಿವಾಸಿಗಳು ಮಹಾರಾಷ್ಟ್ರದಿಂದ ಆಗಮಿಸುತ್ತಿದ್ದರೆ ಕಾಗವಾಡದ ಚಕ್ ಪೋಸ್ಟದಲ್ಲಿ ಅವರ ಕೋವಿಡ್ ನೆಗೆಟಿವ್ ವರದಿ ಇದ್ದರೇ ಮಾತ್ರ ಬಿಡುತ್ತಿದ್ದಾರೆ.

ಪ್ರತಿಯೊಬ್ಬರು ಕಡ್ಡಾಯವಾಗಿ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ, ವೈದ್ಯಕೀಯ ಚಿಕಿತ್ಸೆಗಾಗಿ ಹಾಗೂ ಮಹತ್ವದ ಕಾರ್ಯಗಳಿಗೆ ಮಾತ್ರ ಮನೆಯಿಂದ ಹೊರಗೆ ಬನ್ನಿ. ವಿನಾಕಾರಣ ಪ್ರವಾಸ ಕೈಗೊಳ್ಳದಂತೆ ಸಾರ್ವಜನಿಕರಲ್ಲಿ ಮನವಿ

ಮಾಡಿಕೊಂಡಿದ್ದಾರೆ. ಇದರಿಂದ 3 ನೇ ಅಲೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಪೋಲಿಸ್ ಸಿಬ್ಬಂದಿ ಕುಂಬಾರ.
ಈ ಸಮಯದಲ್ಲಿ ಕಾಗವಾಡ ತಾಲೂಕಾಡಳಿತಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಪೋಲಿಸ್ ಸಿಬ್ಬಂದಿಗಳು ಹಾಗೂ ಇನ್ನಿತರ ಇಲಾಖೆಗಳ ಸಿಬ್ಬಂದಿ ವರ್ಗದವರು ಇದ್ದರು.

 

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');