ಭೀಕರ ಪ್ರವಾಹಕ್ಕೆ ಬಂಗಾಳ ತತ್ತರ: 3 ಲಕ್ಷ ಜನರ ಸ್ಥಳಾಂತರ

0
🌐 Belgaum News :

ಪಶ್ಚಿಮ ಬಂಗಾಳ:  ಭೀಕರ ಪ್ರವಾಹಕ್ಕೆ ಪಶ್ಚಿಮ ಬಂಗಾಳ ಜನಜೀವನ ತತ್ತರಿಸಿ ಹೋಗಿದ್ದು, ಲಕ್ಷಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿವೆ.  ಸುಮಾರು 15 ಮಂದಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಭಾರಿ ಮಳೆಯಿಂದಾಗಿ ಅಣೆಕಟ್ಟುಗಳಿದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆಯಾಗುತ್ತಿದ್ದು, ಪುರ್ಬ ವರ್ಧಮಾನ್, ಪಶ್ಚಿಮ ಬರ್ಧಮಾನ್, ಪಶ್ಚಿಮ ಮೇದಿನಿಪುರ, ಹೂಗ್ಲಿ, ಹೌರಾ ಮತ್ತು ದಕ್ಷಿಣ 24 ಪರಗಣ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ.

ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಈವರೆಗೂ 3 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾತರಿಸಲಾಗಿದೆ. ನೀರಿನಲ್ಲಿ ಕೊಚ್ಚಿ ಹೋಗಿ ಸುಮಾರು 15 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಮೇಲೆ ನಿಗಾ ವಹಿಸಲು ಸಿಎಂ ಮಮತಾ ಬ್ಯಾನರ್ಜಿ ಕೆಲಸ ಮಾಡುತ್ತಿದ್ದು, ಸಚಿವರನ್ನು ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಶೀಲನೆಗೆ ಕಳುಹಿಸಲು ಸಿದ್ಧತೆ ನಡೆಸುತ್ತಿದ್ದಾರೆ.ಇಂದು ಹೌರಾ ಮತ್ತು ಹೂಗ್ಲಿ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿ ನೆರೆ ಪ್ರದೇಶಗಳ ಪರಿಸ್ಥಿತಿ ಅವಲೋಕಿಸುವ ಸಾಧ್ಯತೆಯಿದೆ.
ಪರಿಸ್ಥಿತಿ ವೀಕ್ಷಿಸಿದ ಬಳಿಕ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');