ಆಗಸ್ಟ್ ಮಾಹೆಯ ಪಡಿತರಧಾನ್ಯ ಬಿಡುಗಡೆ

0
🌐 Belgaum News :

ಬೆಳಗಾವಿ, ಆ.04 : ಕೋವಿಡ್ 19 ಎರಡನೇ ಅಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನುಸಾರ ಸಾರ್ವಜನಿಕ ವಿತರಣಾ ಪದ್ಧತಿಯಡಿ 2021 ರ ಆಗಸ್ಟ್ ಮಾಹೆಯ ಧಾನ್ಯಗಳನ್ನು ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಕೋರೋನಾ ರೋಗಾಣು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಂತ್ಯೊದಯ ಪಡಿತರ ಚೀಟಿದಾರರಿಗೆ NFSA ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ ಅಕ್ಕಿ 35 ಕೆಜಿ ಹಾಗೂ PMGKAY ಯೋಜನೆಯಡಿ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು.
ಬಿಪಿಎಲ್(ಆದ್ಯತಾ) ಪಡಿತರ ಚೀಟಿದಾರರಿಗೆNFSAಯೋಜನೆಯಡಿ ಪ್ರತಿ ಸದಸ್ಯರಿಗೆ 5 ಕೆಜಿ, PMGKAYಯೋಜನೆಯಡಿ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ, ಹಾಗೂ NFSA  ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋದಿ ಉಚಿತವಾಗಿ ನೀಡಲಾಗುವುದು.
ಎಪಿಎಲ್ ಪಡಿತರ ಚೀಟಿ ಆದ್ಯೇತರ ಒಪ್ಪಿಗೆ ನೀಡಿದ ಪಡಿತರ ಚೀಟಿಗೆ ಏಕ ಸದಸ್ಯನಿಗೆ 5 ಕೆಜಿ ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆಜಿ ಅಕ್ಕಿ ಪ್ರತಿ ಕೆಜಿ ಗೆ 15 ರೂಪಾಯಂತೆ ನೀಡಲಾಗುವುದು.

ಜಿಲ್ಲೆಯಾದ್ಯಂತ ಇರುವ ನ್ಯಾಯಬೆಲೆ ಅಂಗಡಿಕಾರರು ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಕಾರ್ಯವನ್ನು ಸಾಮಾಜಿಕ ಅಂತರ ಹಾಗೂ ಕೋವಿಡ್-19 ನಿಮಿತ್ಯ ವಹಿಸಬೇಕಾಗಿರುವ ಎಲ್ಲ ಮಾನದಂಡಗಳನ್ವಯ ವಿತರಣೆಗೆ ಕ್ರಮವಹಿಸಲು ಆದೇಶಿಸಿದೆ. ಪ್ರತಿ ಮಂಗಳವಾರ ರಜೆಯ ದಿನವನ್ನು ಹಿಂದೆ ಪಡೆದಿರುತ್ತದೆ. ಮತ್ತು ರಾಷ್ಟ್ರೀಯ ರಜೆಯ ದಿನಗಳನ್ನು ಹೊರತುಪಡಿಸಿ ಪಡಿತರ ವಿತರಣೆಯನ್ನು ತಿಂಗಳ ಪೂರ್ತಿ ಮಾಡುವಂತೆ ನ್ಯಾಯಬೆಲೆ ಅಂಗಡಿಕಾರರಿಗೆ ಆದೇಶವನ್ನು ಮಾಡಿರುತ್ತಾರೆ.

ಪಡಿತರ ಚೀಟಿದಾರರಿಗೆ ಯಾವುದೇ ರೀತಿಯಾಗಿ ನ್ಯಾಯಬೆಲೆ ಅಂಗಡಿಕಾರರಿಂದ ತೊಂದರೆಯಾದಲ್ಲಿ 1967 ಟೋಲ್‍ಫ್ರಿ ಸಂಖ್ಯೆಗೆ ಕರೆ ಮಾಡಿ ದೂರನ್ನು ದಾಖಲಿಸತಕ್ಕದ್ದು. ಮತ್ತು ಜಿಲ್ಲೆಯ ನ್ಯಾಯಬೆಲೆ ಅಂಗಡಿಕಾರರು ಸರ್ಕಾರ ನೀಡುತ್ತಿರುವ ಪಡಿತರ ವಸ್ತುಗಳನ್ನು ಹೊರತುಪಡಸಿ ಬೇರೆ ವಸ್ತುಗಳನ್ನು ವಿತರಣೆ ಮಾಡತಕ್ಕದ್ದಲ್ಲ ಹಾಗೂ ಯಾವುದೇ ಕಾರಣಕ್ಕೂ ಪ್ರತಿ ಪಡಿತರ ಚೀಟಿದಾರರಿಂದ ಸಬೂಬು ಹೇಳಿ ಇಂಟರನೇಟ್ ವಗೈರೆ ಚಾರ್ಜಸ್‍ನ್ನು ವಸೂಲಿ ಮಾಡತಕ್ಕದ್ದಲ್ಲ ಒಂದು ವೇಳೆ ಈ ರೀತಿ ದೂರುಗಳು ಬಂದಲ್ಲಿ ಆಯಾ ತಾಲ್ಲೂಕಿನ ಕಾರ್ಯನಿರ್ವಾಹಕ ಸಿಬ್ಬಂದಿಗಳನ್ನೆ ನೇರ ಹೊಣೆ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು.
ವಿಶೇಷ ಸೂಚನೆ:

ಕೊವೀಡ್-19 ತುರ್ತು ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಕಾರರು ಬೆಳಿಗ್ಗೆ 7-00 ಗಂಟೆಯಿಂದ ರಾತ್ರಿ 9-00 ಗಂಟೆ ತಿಂಗಳ ಅಂತ್ಯದವರೆಗೆ ಊಟದ ಸಮಯವನ್ನು ಹೊರತುಪಡಿಸಿ ಪಡಿತರ ವಿತರಣೆ ಕಾರ್ಯ ನಡೆಸುವುದು. ಪಡಿತರ ಪಡೆಯಲು ಬರುವ ಫಲಾನುಭವಿಗಳು ಕಡ್ಡಾಯವಾಗಿ ಮಾಸ್ಕ್ (ಮುಖ ಗವಸು) ಧರಿಸಿರಬೇಕು.ಪಡಿತರ ಚೀಟಿದಾರರು ಪಡಿತರ ಪಡೆಯಲು ಸರತಿ ಸಾಲಿನಲ್ಲಿ ನಿಂತಾಗ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳತಕ್ಕದ್ದು.

ಅಂತರರಾಜ್ಯ/ಅಂತರ ಜಿಲ್ಲೆ ಪೆÇೀರ್ಟೆಬಿಲಿಟಿ ಜಾರಿ ಇರುವುದರಿಂದ ಯಾವುದೇ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');