ಕೈ ತಪ್ಪಿದ ಸಚಿವ ಸ್ಥಾನ : ಬಿಎಸ್ ವೈ ಮುಂದೆ ಕಣ್ಣೀರಿಟ್ಟ ರೇಣುಕಾಚಾರ್ಯ

0
🌐 Belgaum News :

ಬೆಂಗಳೂರು : ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರು ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.

ಸಂಪುಟ ಸ್ಥಾನ ಕೈತಪ್ಪಿರುವ ಮಾಹಿತಿ ತಿಳಿಯುತ್ತಿದ್ದಂತೆ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದ ರೇಣುಕಾಚಾರ್ಯ ಅವರು, ಎರಡು ಗಂಟೆಗೂ ಹೆಚ್ಚು ಹೊತ್ತು ಬಿಎಸ್​​ವೈ ಅವರೊಂದಿಗೆ ಮಾತುಕತೆ ನಡೆಸಿದರು. ಮಾತುಕತೆ ವೇಳೆ ಭಾವುಕರಾಗಿದ್ದ ರೇಣುಕಾಚಾರ್ಯ ಅವರು ಒಂದು ಹಂತದಲ್ಲಿ ಗದ್ಗದಿತರಾಗಿ ಕಣ್ಣೀರಿಟ್ಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ನಾನು ಪಕ್ಷದ ನಿಷ್ಠಾವಂತನಾಗಿ ಕೆಲಸ ಮಾಡಿದ್ದೇನೆ. ಆದರೂ ಸಚಿವ ಸ್ಥಾನ ಕೈತಪ್ಪಿರುವುದು ಯಾಕೆ? ನಾನು ಮಾಡಿರುವ ತಪ್ಪಾದರೂ ಏನು? ಪಕ್ಷ ವಿರೋಧಿಗಳ ವಿರುದ್ಧ ಹೋರಾಟ ಮಾಡಿದ್ದೇ ತಪ್ಪಾ ಎಂದು ಪ್ರಶ್ನಿಸುತ್ತಾ ಭಾವಕರಾಗಿದ್ದರಂತೆ.

ಆಗ ಬಿಎಸ್‌ವೈ  ಶಾಸಕರನ್ನು ಸಮಾಧಾನ ಪಡಿಸಲು, ಎಲ್ಲವೂ ಮುಗಿದೇ ಹೋಯ್ತು ಅಂತಾ ಭಾವಿಸುವುದು ಬೇಡ. ಪಕ್ಷದಲ್ಲಿ ಮುಂದೆ ಒಳ್ಳೆಯ ಭವಿಷ್ಯವಿದೆ. ಒಳ್ಳೆಯ ಅವಕಾಶ ಸಿಗಲಿದೆ ಎಂದು ಸಮಾಧಾನಪಡಿಸಿದ್ದಾರೆ ಎನ್ನಲಾಗಿದೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');