ಕೋವಿಡ್ ಮುನ್ನೆಚ್ಚರಿಕೆ, ಲಸಿಕಾಕರಣ ಜನಜಾಗೃತಿ: ಸಂಚಾರಿ ವಾಹನಕ್ಕೆ ಹಸಿರುನಿಶಾನೆ

0
🌐 Belgaum News :

ಬೆಳಗಾವಿ, ಆ.04  : ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಲಸಿಕಾ ಅಭಿಯಾನ ಕುರಿತು ಜಾಗೃತಿ ಮೂಡಿಸುವ ಹತ್ತು ದಿನಗಳ ಜನಜಾಗೃತಿ ಕಾರ್ಯಕ್ರಮವನ್ನು ಭಾರತ ಸರಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ಧಾರವಾಡ ವತಿಯಿಂದ ಹಮ್ಮಿಕೊಳ್ಳಲಾಗಿರುತ್ತದೆ.

ಬೆಳಗಾವಿ ಸುತ್ತಮುತ್ತಲ ಹಳ್ಳಿಗಳಿಗೆ ತೆರಳುವ ಸಂಚಾರಿ ವಾಹನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರದ ನೋಡಲ್ ಅಧಿಕಾರಿ ಡಾ.ರಂಗಸ್ವಾಮಿ ಅವರು ಬುಧವಾರ(ಆ.4) ಹಸಿರುನಿಶಾನೆ ತೋರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ವಿ.ಮುನ್ಯಾಳ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ಗಡೇದ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ. ಸರೋಜಾ ಅಗಡಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಕವಿತಾ ಕುಂಬಾರ, ಅಪರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾಜಿ ಮಾಳಗೆಣ್ಣವರ ಮತ್ತಿತರರು ಉಪಸ್ಥಿತರಿದ್ದರು.


ಜಿಲ್ಲೆಯ ಆಯ್ದ ತಾಲ್ಲೂಕುಗಳಲ್ಲಿ ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸುವುದರ ಜತೆಗೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಸಂಗೀತ ಮತ್ತು ನಾಟಕ ತಂಡವು ಅರಿವು ಮೂಡಿಸುತ್ತದೆ. ಆಗಸ್ಟ್ 4 ರಿಂದ ಆಗಸ್ಟ್ 13ರ ವರೆಗೆ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಭಾರತ ಸರಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಧಾರವಾಡದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಕ್ಷೇತ್ರ ಪ್ರಚಾರಾಧಿಕಾರಿ ಶ್ರುತಿ ಎಸ್.ಟಿ. ಅವರು ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');