ಕ್ರಿಕೆಟ್ ಆಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು

0
🌐 Belgaum News :

ಉಡುಪಿ : ಕ್ರಿಕೆಟ್ ಆಡುತ್ತಿದ್ದ ಯುವಕ ಕುಸಿದು ಬಿದ್ದು ಸಾವಿಗೀಡಾದ ಘಟನೆ ಜಿಲ್ಲೆಯ ನಂದಳಿಕೆ ಗ್ರಾಮದ ಮಾವಿನಕಟ್ಟೆ ಆಟದ ಮೈದಾನದಲ್ಲಿ ನಡೆದಿದೆ.

ಸುಕೇಶ್ ಶೆಟ್ಟಿ ( 27 ) ಮೃತಪಟ್ಟ ಯುವಕ.

ಕ್ರಿಕೆಟ್ ಆಟವಾಡುತ್ತಿದ್ದ ಯುವಕ, ಬೌಲಿಂಗ್ ಮಾಡುವಾಗ ಕುಸಿದು ಬಿದ್ದಿದ್ದಾನೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದರು.

ಯುವಕ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿದ್ದನು. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');