ರಾಜೀವ್ ಗಾಂಧಿ ‘ಖೇಲ್ ರತ್ನ’ ಪ್ರಶಸ್ತಿ ಹೆಸರು ಮರು ನಾಮಕರಣ; ಪ್ರಧಾನಿ ಮೋದಿ ಘೋಷಣೆ

0
🌐 Belgaum News :

ಹೊಸದಿಲ್ಲಿ: ಹಲವು ನಾಗರಿಕರ ಮನವಿಯ ಮೇರೆಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು “ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ” ಪ್ರಶಸ್ತಿ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುವುದು ಎಂದು ಘೋಷಿಸಿದ್ದಾರೆ.

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡಲು ಭಾರತದಾದ್ಯಂತ ನಾಗರಿಕರಿಂದ ಅನೇಕ ಮನವಿಗಳನ್ನು ಸ್ವೀಕರಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

“ಜನರ ಅಭಿಪ್ರಾಯಗಳಿಗಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಮೇಜರ್ ಧ್ಯಾನ್ ಚಂದ್ ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದು, ಭಾರತಕ್ಕೆ ಗೌರವ ಹಾಗೂ ಹೆಮ್ಮೆಯನ್ನು ತಂದಿದ್ದಾರೆ. ನಮ್ಮ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವವನ್ನು ಅವರ ಹೆಸರಿಗೆ ಇಡುವುದು ಸೂಕ್ತ” ಎಂದು ಮೋದಿ ಅವರು ಹೇಳಿದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');