ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ NCP ಅಧ್ಯಕ್ಷ ಶರದ್ ಪವಾರ್

0
🌐 Belgaum News :

ಬೆಂಗಳೂರು : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯ ಹಾಗೂ ಎನ್ ಸಿ ಪಿ ಅಧ್ಯಕ್ಷ  ಶರದ್ ಪವಾರ್ ಅವರು, ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಕರ್ನಾಟಕ- ಮಹಾರಾಷ್ಟ್ರ  ರಾಜ್ಯಗಳ ನಡುವಿನ ನೀರು ಹಂಚಿಕೆ ಹಾಗೂ ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ ನೀಡುವ ಕುರಿತು ಉಭಯ ಮುಖಂಡರು ಸಮಾಲೋಚನೆ ನಡೆಸಿದರು.

ಉಭಯ ರಾಜ್ಯಗಳ  ನಡುವಿನ ಅಂತರರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತ ಚರ್ಚೆ ನಡೆಸಲು ಶೀಘ್ರದಲ್ಲಿ ಸಭೆ ನಡೆಸಲು ಸಹಮತ ವ್ಯಕ್ತಪಡಿಸಿದರು. ////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');