ಅತಿವೃಷ್ಟಿಯಿಂದ ಒಟ್ಟಾರೆ 2800 ಕೋಟಿ ಹಾನಿ: ಸ್ಪಷ್ಟನೆ

0
🌐 Belgaum News :

 

ಬೆಳಗಾವಿ,ಆ.07: ಜಿಲ್ಲೆಯಲ್ಲಿ ಇತ್ತೀಚಿನ ಅತಿವೃಷ್ಟಿಯಿಂದ ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳೆ, ರಸ್ತೆ, ಸೇತುವೆ ಇತರ ಮೂಲಸೌಕರ್ಯಗಳು ಸೇರಿದಂತೆ ಒಟ್ಟಾರೆ 2800 ಕೋಟಿ ರೂಪಾಯಿ ಹಾನಿಯಾಗಿರುತ್ತದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಹಿತಿಯನ್ನು ನೀಡುವಾಗ 7800 ಕೋಟಿ ಹಾನಿಯಾಗಿದೆ ಎಂದು ತಿಳಿಸಲಾಗಿತ್ತು. ಅದು 2800 ಕೋಟಿ ಎಂದಾಗಬೇಕಿತ್ತು ಎಂದು ಅವರು ತಿಳಿಸಿದ್ದಾರೆ.

ಫೋಟೊ ಕ್ಯಾಪ್ಷನ್ – 1 : ಶ್ರೀ ಗೋವಿಂದ ಎಂ. ಕಾರಜೋಳ, ಮಾನ್ಯ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು, ಇಂದು ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದ ತುಂಬಿ ಹರಿಯುತ್ತಿರುವ ವೇದಗಂಗಾ ನದಿಯ ವೀಕ್ಷಣೆ ಮಾಡಿ ಬ್ಯಾರೇಜ ದುರಸ್ತಿಗೆ ಸೂಚಿಸಿದರು.

ಫೋಟೊ ಕ್ಯಾಪ್ಷನ್ – 2 : ಬೆಳಗಾವಿ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಬೆಳೆ ಹಾಗೂ ಕೃಷ್ಣಾ ನದಿ ಹರಿವು ಪ್ರಮಾಣವನ್ನು ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆ ಬಳಿ ಶನಿವಾರ ವೀಕ್ಷಿಸಿದರು. ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ, ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ ಮತ್ತಿತರರು ಉಪಸ್ಥಿತರಿದ್ದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');