ಚಿನ್ನದ ಚೋಪ್ರಾಗೆ ತರಬೇತಿ ನೀಡಿದ ಕಾಶಿನಾಥ್ ಗೆ 10 ಲಕ್ಷ ರೂ. ಘೋಷಿಸಿದ ಕ್ರೀಡಾ ಇಲಾಖೆ

0
🌐 Belgaum News :

ಬೆಂಗಳೂರು: ಟೋಕಿಯೊ ಒಲಂಪಿಕ್ ನಲ್ಲಿ ಈಡೀ ಭಾರತವೇ ತಿರುಗಿ ನೋಡುವಂತೆ ಮಾಡಿದ ಬಂಗಾರದ ಮನುಷ್ಯ ನೀರಜ್ ಚೋಪ್ರಾಗೆ  ತರಬೇತಿ ನೀಡಿದ್ದು ಕನ್ನಡಿಗ, ಈ ಹೆಮ್ಮೆಯಿಂದ ತರಬೇತಿ ನೀಡಿದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಾಶಿನಾಥ್ ನಾಯ್ಕ  ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿ, 10 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.

2010 ರ ಕಾಮನ್ವೆಲ್ತ್ ನಲ್ಲಿ ಕಾಶಿನಾಥ್ ಈಟಿ ಎಸೆತದಲ್ಲಿ ಕಂಚಿನ ಪದಕ‌ಗಳಿಸಿದ್ದರು. ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಸ್ವರ್ಣಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಇಂತಹ ಸಾಧನೆಗೆ ಬೆನ್ನೆಲುಬಾದ ಕನ್ನಡಿಗ ಕಾಶಿನಾಥ್ ನಾಯ್ಕ್ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೂ. 10 ಲಕ್ಷ ನಗದು ಬಹುಮಾನ ಘೋಷಿಸಿದ್ದಾರೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');