ನೂತನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ ಜೆ ಅವರಿಗೆ ಅಧಿಕಾರ ಹಸ್ತಾಂತರ

ಜಿಪಂ. ಚುನಾವಣೆ ಗೆಲ್ಲುವಿಗಾಗಿ ನಿಮ್ಮ ಶಕ್ತಿ ಪ್ರದರ್ಶನ ಮಾಡಿ : ಸತೀಶ ಜಾರಕಿಹೊಳಿ

0
🌐 Belgaum News :

ಜಿಪಂ. ಚುನಾವಣೆ ಗೆಲ್ಲುವಿಗಾಗಿ ನಿಮ್ಮ ಶಕ್ತಿ ಪ್ರದರ್ಶನ ಮಾಡಿ : ಸತೀಶ ಜಾರಕಿಹೊಳಿ

 

 

ಬೆಳಗಾವಿ : ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ  ನೇಮಕರಾದ ಪ್ರದೀಪ.ಎಂ.ಜೆ. ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು, ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸೋಮವಾರ ಅಧಿಕಾರ ಹಸ್ತಾಂತರಿಸಿ, ಸನ್ಮಾನಿಸಿದರು.

ಬಳಿಕ ನೂತನ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು. ತದನಂತರ ಕಾರ್ಯಕರ್ತರ ಅಭಿನಂದನಾ ಸಮಾರಂಭದ  ಅಧ್ಯಕ್ಷತೆ ವಹಿಸಿ ಸತೀಶ್ ಜಾರಕಿಹೊಳಿ ಮಾತನಾಡಿದರು.

ಸಧ್ಯದಲ್ಲೆ ಜಿಲ್ಲಾ ಪಂಚಾಯತ್ ಚುನಾವಣೆ ಎದುರಾಗಲಿದೆ. ಈ ನಿಟ್ಟಿನಲ್ಲಿ,  ತಳಮಟ್ಟದಿಂದ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಮಾಡುವ ಉದ್ದೇಶದಿಂದ  ಪ್ರದೀಪ.ಎಂ.ಜೆ ಅವರನ್ನು ಪ್ರಧಾನ ಕಾರ್ಯದರ್ಶಿ  ನೇಮಕ ಮಾಡಲಾಗಿದೆ. ಈ ಚುನಾವಣೆಯಲ್ಲಿ ನಿಮ್ಮ ಶಕ್ತಿ ಪ್ರದರ್ಶನ ಮಾಡಬೇಕೆಂದು ಸಲಹೆ ನೀಡಿದರು.

ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ಮನೆ-ಮನೆಗೆ ತಿಳಿಸಿ:


ಅಧ್ಯಕ್ಷ,  ಪ್ರಧಾನ ಕಾರ್ಯದರ್ಶಿ, ಕಾರ್ಯಕರ್ತರ ಮೇಲೆ ಬಹಳಷ್ಟು ನಿರೀಕ್ಷೆ ಇಡಲಾಗಿದೆ.    ಪಕ್ಷದ ಶಿಸ್ತನ್ನು ಮೈಗೂಡಿಸಿಕೊಂಡು ಕಾರ್ಯ ನಿರ್ವಹಿಸಿ, ನಿಮಗೆ ಹೆಚ್ಚಿನ ಜಬಾಬ್ದಾರಿ ನೀಡಲಾಗಿದೆ.  ಎಲ್ಲಾ ಕಾಂಗ್ರೆಸ್ ಶಾಸಕರು ಹಾಗೂ ನಾಯಕರ ಬೆಂಬಲವಿದೆ.  ಗ್ರಾಮೀಣ ಪ್ರದೇಶದ ಮನೆ-ಮನೆಗೂ ತೆರಳಿಕಾಂಗ್ರೆಸ್ ಅಭಿವೃದ್ಧಿಕಾರ್ಯಗಳನ್ನು  ಜನರಿಗೆ  ಮುಟ್ಟಿಸಬೇಕು ಎಂದು ಹೇಳಿದರು.

ತಳಮಟ್ಟದಲ್ಲಿ ಪಕ್ಷ  ಬಲಿಷ್ಠವಾದರೆ  ಜಿಪಂ. ಚುನಾವಣೆಯಲ್ಲಿ ಅತೀ ಹೆಚ್ಚು ಕ್ಷೇತ್ರದಲ್ಲಿ ಕಾಂಗ್ರೆಸ್  ಗೆಲುವು ಸಾಧಿಸಲು ಅನುಕೂಲವಾಗುತ್ತದೆ.  ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲು ಇದು ಒಳ್ಳೆಯ ಅವಕಾಶ,  ಹಗಲಿರುಳು ಪಕ್ಷದ ಸಂಘಟನೆಗಾಗಿ ಕೆಲಸ ಮಾಡಿ. 2023 ರಲ್ಲಿ ಎದುರಾಗುವ ವಿಧಾನ ಸಭಾ ಚುನಾವಣೆಯಲ್ಲಿ  ಹೆಚ್ಚು ಕ್ಷೇತ್ರಗಳು, ನಮ್ಮ ಪಾಲಾಗುವ ಗುರಿ ಇಟ್ಟಕೊಂಡು ಕಾರ್ಯನಿರ್ವಹಿಸಬೇಕು ಎಂದರು. ಬಳಿಕ ಮುಂಚೂಣಿ ಘಟಕ ಹಾಗೂ ಬ್ಲಾಕ್ ಕಾಂಗ್ರೆಸ್ ಘಟಕ ಸದಸ್ಯರ ಸಭೆ ನಡೆಸಲಾಯಿತು.

ಮಾಜಿ ಶಾಸಕ ಅಶೋಕ ಪಟ್ಟಣ,  ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ,  ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ,  ಚಿಕ್ಕೋಡಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ  ಲಕ್ಷ್ಮಣರಾವ್ ಚಿಂಗಳೆ,  ಸುನೀಲ ಹನಮನ್ನವರ, ವಿಶ್ವಾಸ್ ವೈದ್ಯ , ಅರವಿಂದ ದಳವಾಯಿ  ಮತ್ತು  ಜಿಲ್ಲಾ‌ಘಟಕದ ಎಲ್ಲಾ ಪದಾಧಿಕಾರಿಗಳು  ಇತರರು ಇದ್ದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');