ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ

0
🌐 Belgaum News :

ಚಿಕ್ಕೋಡಿ : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ನಿಲ್ಲಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್‍ನ ಚಿಕ್ಕೋಡಿ ತಾಲೂಕಾ ಘಟಕದಿಂದ ಉಪವಿಭಾಗಾಧಿಕಾರಿ ಯುಕೇಶಕುಮಾರ ಅವರಿಗೆ ಮನವಿ ಸಲ್ಲಿಸಿದರು.

ಖಾಸಗೀಕರಣ ಮತ್ತು ಸಾರ್ವಜನಿಕ ವಲಯಗಳ ಉದ್ದಿಮೆಗಳ, ಸರಕಾರಿ ಇಲಾಖೆಗಳ ಬಂಡವಾಳ ವಾಪಸ್ಸಾತಿ ನಿಲ್ಲಿಸಬೇಕು. ಕರಾಳ ಅಗತ್ಯ ರಕ್ಷಣಾ ಸೇವಾ ಸುಗ್ರಿವಾಜ್ಞೆಯನ್ನು ವಾಪಸ್ಸ ಪಡೆಯಬೇಕು. ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ಸಂಹಿತೆಗಳು ಹಾಗೂ ಜನ ವಿರೋಧಿ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ರದ್ದುಪಡಿಸಬೇಕು ಎಂದು ಆಗೃಹಿಸಿದರು.

ಪೆಟ್ರೋಲ್, ಡಿಸೇಲ್, ಅಡುಗೆ ಅನೀಲ, ಖಾದ್ಯತೈಲ್ ಇತ್ಯಾದಿ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ ಆಗಿರುವ ಏರಿಕೆಯನ್ನು ಸರಿಪಡಿಸಬೇಕು. ಉದ್ಯೋಗ ಖಡಿತ ಅಥವಾ ವೇತನ ಖಡಿತ ಮಾಡಬಾರದು. ಕೊರೊನಾ ಪಿಡುಗಿನ ಅವಧಿಯಲ್ಲಾದ ಉದ್ಯೋಗ ಹಾಗೂ ವೇತನ ನಷ್ಟಕ್ಕೆ ಪರಿಹಾರ ನೀಡಬೇಕು. ಹೆಚ್ಚು ಉದ್ಯೋಗ ಸೃಷ್ಟಿಸಬೇಕು.

ಸರಕಾರಿ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗ್ರಾಮ ಪಂಚಾಯತ ನೌಕರರನ್ನು ಖಾಯಂಗೊಳಿಸಬೇಕು. ಬಾಕಿ ಇರುವ ವೇತನವನ್ನು ಕೂಡಲೇ ನೀಡುವ ವ್ಯವಸ್ಥೆ ಮಾಡಬೇಕು. ಎಲ್ಲ ರೈತರ ಬೆಳೆಗಳಿಗೂ ಖಾತರಿ ಖರೀದಿಯೊಂದಿಗೆ ಸಮಗ್ರ ಉತ್ಫಾದನಾ ವೆಚ್ಚ ಮತ್ತು ಶೇ.50 ಪ್ರಕಾರ ನಿಗದಿಪಡಿಸಿದ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಯಾಗಿ ದೊರೆಯುವಂತೆ ಕಾಯ್ದೆ ಮಾಡಬೇಕು. ಋಣಮುಕ್ತ ಕಾಯ್ದೆಯನ್ನು ಅಂಗೀಕರಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮ ಪಂಚಾಯತ ನೌಕರರ ಸಂಘದ ಅಧ್ಯಕ್ಷ ಡಿ.ಕೆ.ಬಜನಾಯಕ, ಶಕುಂತಲಾ ಊರಣೆ, ಶೈಲಜಾ ಮಾಳಿ, ಗುರವ್ವಾ ಮಡಿವಾಳ, ಸಿಕಂದರ ಸೈಯದ, ಕಲ್ಲಪ್ಪ ಬೆಳಸ್ಕರ, ಪುಂಡಲೀಕ ಪವಾರ, ಮಹಾಂತೇಶ ಶಿರಗಾಂವೆ, ಗಣಪತಿ ಗುರವ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಅಕ್ಷರ ದಾಸೋಹ ಯೋಜನೆ ಅಡುಗೆ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯತ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');