ಪ್ರಕಟಣೆಯಲ್ಲಿ ತಿಳಿಸಿದ್ದಾರೆ

0
🌐 Belgaum News :

ಆ.15 ರಂದು ಅಂಗಡಿ-ಮುಂಗಟ್ಟು, ವ್ಯಾಪಾರ-ವಹಿವಾಟುಗಳಲ್ಲಿ ಪ್ಲಾಸ್ಟಿಕ್ ರಾಷ್ಟ್ರದ್ವಜಗಳ ಮಾರಾಟ ನಿಷೇಧ

ಬೆಳಗಾವಿ,ಆ.9 : ಆ.15 ರಂದು ಜರುಗಲಿರುವ ಸ್ವಾತಂತ್ರ್ಯ ದಿನಾಚರಣೆಯಂದು ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಸುತ್ತಿರುವ ಎಲ್ಲ ಬಗೆಯ ಅಂಗಡಿ-ಮುಂಗಟ್ಟು, ವ್ಯಾಪಾರ-ವಹಿವಾಟುಗಳಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಹಾಗೂ ರಾಷ್ಟ್ರದ್ವಜದ ಚಿಹ್ನೆಯುಳ್ಳ ಮಾಸ್ಕಗಳ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸದರಿ ನಿಷೇಧಿತ ಪ್ಲಾಸ್ಟಿಕ್ ರಾಷ್ಟ್ರದ್ವಜಗಳ ಮಾರಾಟ ಹಾಗೂ ರಾಷ್ಟ್ರದ್ವಜದ ಚಿಹ್ನೆಯುಳ್ಳ ಮಾಸ್ಕಗಳ ಮಾರಾಟ ಮಾಡುವುದು ಸರ್ಕಾರಿ ಆದೇಶದ ಉಲ್ಲಂಘನೆಯಾಗುತ್ತಿದ್ದು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸದರಿ ವಿಷಯದಲ್ಲಿ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಬೇಕು ತಪ್ಪಿದ್ದಲ್ಲಿ ನಿಯಮಾನುಸಾರ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ಡಿ.ಎಸ್.ಟಿ – ಪಿಹೆಚ್.ಡಿ ಶಿಷ್ಯವೇತನ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

 

ಬೆಳಗಾವಿ, : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) 2018-19 ಸಾಲಿನಿಂದ ಕರ್ನಾಟಕ ಡಿ.ಎಸ್.ಟಿ-ಪಿಹೆಚ್.ಡಿ. ಶಿಷ್ಯವೇತನ ಎಂಬ ಕಾರ್ಯಕ್ರಮಕ್ಕೆ ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ 2021-22 ನೇ ಸಾಲಿನಲ್ಲಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆ/ ಕಾಲೇಜುಗಳಲ್ಲಿ ಪಿಹೆಚ್.ಡಿ ಪದವಿಗೆ ಈಗಾಗಲೇ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಆನ್‍ಲೈನ್ ನಲ್ಲಿ ಸೆ.6, 2021 ರೊಳಗೆ ಸಲ್ಲಿಸಬಹುದು ಎಂದು ಕೆಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

ಹಾಲು ಕರೆಯುವ ಯಂತ್ರದ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ಬೆಳಗಾವಿ, : ಕನಿಷ್ಠ 02 ಮಿಶ್ರ ತಳಿ ಹಸುಗಳನ್ನು ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಒಂದು ಬಕೇಟ್ ಹಾಲು ಹಿಂಡುವ ಸಾಮಥ್ರ್ಯವುಳ್ಳ ಹಾಲು ಕರಿಯುವ ಯಂತ್ರ ಮತ್ತು 02-ರಬ್ಬರ್ ಮ್ಯಾಟ್ ಇರುವ ಒಂದು ಘಟಕಕ್ಕೆ 90%ರಷ್ಟು ಸಹಾಯಧನ ಮತ್ತು 10% ಫಲಾನುಭವಿ ವಂತಿಕೆಯೊಂದಿಗೆ ನೀಡುವುದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಿಗದಿತ ನಮೂನೆಯ ಅರ್ಜಿಯನ್ನು ಅಗಸ್ಟ್ 22 ರ ಒಳಗಾಗಿ ತಾಲೂಕಿನ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ ಕಚೇರಿಯಿಂದ ಪಡೆದುಕೊಂಡು ತಾಲೂಕಿನ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆಯ ಕಚೇರಿಯ ವೇಳೆಯಲ್ಲಿ ಖುದ್ದಾಗಿ ಇಲ್ಲವೇ ದೂರವಾಣಿಯ ಮೂಲಕ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಡಾ: ಅಶೋಕ ಎಲ್. ಕೊಳ್ಳಾ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');