ಬುಡರಕಟ್ಟಿ ರಸ್ತೆ ಕಾಮಗಾರಿಗೆ ಶಾಸಕ ಕೌಜಲಗಿ ಚಾಲನೆ

0
🌐 Belgaum News :

ಬೈಲಹೊಂಗಲ -ತಾಲೂಕಿನ ಬುಡರಕಟ್ಟಿ – ಬೆಳವಡಿ ರಾಜ್ಯ ಹೆದ್ದಾರಿ ಕಾಮಗಾರಿಗೆ ಶಾಸಕ ಮಹಾಂತೇಶ ಕೌಜಲಗಿ ಅವರು ಭೂಮಿ ಪೂಜೆ ನೆರವೇರಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಬುಡರಕಟ್ಟಿ ಗ್ರಾಮದ ಬಳಿ ಸೋಮವಾರ ಜರುಗಿದ ಈ ಪೂಜಾ ಕಾರ್ಯಕ್ರಮದಲ್ಲಿ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಸುಮಾರು 5 ಕೋಟಿ ರೂ, ಗಳ ವೆಚ್ಚದಲ್ಲಿ ಬುಡರಕಟ್ಟಿ – ಬೆಳವಡಿ ರಾಜ್ಯ ರಸ್ತೆಯ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ನುಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವರುದ್ರಪ್ಪ ಹಟ್ಟಿಹೊಳಿ ಬುಡರಕಟ್ಟಿ ಗ್ರಾ ಪಂ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರು ಗ್ರಾಮದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');