ಚಿತ್ರೀಕರಣದ ವೇಳೆ ಮತ್ತೊಂದು ಅವಘಡ; ಹಿರಿಯ ನಟ ಪ್ರಕಾಶ್ ರಾಜ್ ಗೆ ಗಂಭೀರ ಗಾಯ

0
🌐 Belgaum News :

ಹೈದರಾಬಾದ್: ನಿನ್ನೆಯಷ್ಟೇ ಸ್ಯಾಂಡಲ್ ವುಡ್ ಸಿನಿಮಾ “ಲವ್ ಯೂ ರಚ್ಚು” ಚಿತ್ರದ ಚಿತ್ರೀಕರಣದ ವೇಳೆ ನಡೆದ ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ಅವಘಡದ ಸುದ್ದಿ ಕೇಳಿ ಬಂದಿದೆ. ಸಿನಿಮಾ ಶೂಟಿಂಗ್ ವೇಳೆ ಬಿದ್ದು ಹಿರಿಯ ನಟ ಪ್ರಕಾಶ್ ರಾಜ್ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದನುಷ್ ಅಭಿನಯದ ಸಿನಿಮಾ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಸಾಹಸ ದೃಶ್ಯ ಚಿತ್ರೀಕರಿಸುವ ವೇಳೆ ನಟ ಪ್ರಕಾಶ್ ರಾಜ್ ಅವರ ಕೈಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದು, ಶೂಟಿಂಗ್ ವೇಳೆ ಬಿದ್ದು ಸಣ್ಣ ಪೆಟ್ಟಾಗಿದೆ. ಶಸ್ತ್ರಚಿಕಿತ್ಸೆಗಾಗಿ ನನ್ನ ಸ್ನೇಹಿತ ಡಾ.ಗುರುವರೆಡ್ಡಿ ಬಳಿ ತೆರಳುತ್ತಿದ್ದೇನೆ. ಬೇಗ ಗುಣಮುಖನಾಗುತ್ತೇನೆ, ಅಭಿಮಾನಿಗಳು ಆತಂಕ್ಕೀಡಾಗಬೇಕಿಲ್ಲ ಎಂದು ತಿಳಿಸಿದ್ದಾರೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');