ಕೋಟ್ಪಾ-2003 ಕಾಯ್ದೆ ಅಡಿ ದಾಳಿ; 34 ಪ್ರಕರಣ ದಾಖಲು

0
🌐 Belgaum News :
ಬೆಳಗಾವಿ,: ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿಗಳ ಮಾರ್ಗದರ್ಶನದಡಿಯಲ್ಲಿ ನಡೆದ ದಾಳಿಯಲ್ಲಿ ಕೋಟ್ಪಾ-2003 ಕಾಯ್ದೆಯ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ ಮಾಡುವವರ ವಿರುದ್ಧ ಒಟ್ಟು 34 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು.
ಶೈಕ್ಷಣಿಕ ಆವರಣದ 100 ಮೀಟರ ಅಂತರದೋಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಿ ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಸಲಾಯಿತು. ಸೆಕ್ಷನ್-4 ನಾಮಫಲಕವನ್ನು ವಿತರಿಸಲಾಯಿತು.
ಸಾರ್ವಜನಿಕರಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮದ ಕುರಿತು ಅರಿವು ಮೂಡಿಸಲಾಯಿತು. ಸದರಿ ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ.ಶ್ವೇತಾ ಪಾಟೀಲ, ಜಿಲ್ಲಾ ಸಮಾಜ ಕಾರ್ಯಕರ್ತೆ ಕವಿತಾ ರಾಜನ್ನವರ ಹಾಗೂ ಪೊಲೀಸ್ ಸಿಬ್ಬಂದಿಗಳು ದಾಳಿಯಲ್ಲಿ ಉಪಸ್ಥಿತರಿದ್ದರು ಎಂದು ಜಿಲ್ಲಾಸಮೀಕ್ಷಾ/ತಂಬಾಕು ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');