ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

0
🌐 Belgaum News :

ರಾಜ್ಯ ಹಣಕಾಸು ಯೋಜನೆ ಮತ್ತು ಪುರಸಭೆ ನಿಧಿ ಅನುದಾನದಲ್ಲಿ ವೈಯಕ್ತಿಕ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಬೆಳಗಾವಿ, : 2021-22 ನೇ ಸಾಲಿನ ರಾಜ್ಯ ಹಣಕಾಸು ಯೋಜನೆ ಮತ್ತು ಪುರಸಭೆ ನಿಧಿ ಅನುದಾನದಲ್ಲಿ ಪರಿಶಿಷ್ಟ ಪಂಗಡ, ಹಾಗೂ ವಿಕಲಚೇತನ ವರ್ಗದವರಿಗೆ ವೈಯಕ್ತಿಕ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರ ಪ್ರಸ್ತುತ ಈ ವರ್ಷದ ವಾರ್ಷಿಕ ಆದಾಯ 3 ಲಕ್ಷ ಮೀರಬಾರದು, ಹಾಗೂ ಅರ್ಜಿಗಳನ್ನು ಸ್ವೀಕರಿಸಲು ಸೆಪ್ಟೆಂಬರ್À 15 ಕೊನೆಯ ದಿನವಾಗಿದ್ದು, ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಸನ್ 2021-22 ನೇ ಸಾಲಿನ ಎಸ್.ಎಫ್.ಸಿ/ಪುರಸಭೆ ನಿಧಿ ಯೋಜನೆಯ ಶೇ.29 /ಶೇ 24.10 ಅಡಿಯಲ್ಲಿ “ಪರಿಶಿಷ್ಟ ಪಂಗಡ” ವರ್ಗದವರಿಗೆ ಮನೆಯ ಮೇಲ್ಚಾವಣೆಯ ದುರಸ್ತಿ ಸಾಮಗ್ರಿ ಖರೀದಿಸಲು ಆರ್ಥಿಕ ಧನಸಹಾಯ ನೀಡಲಾಗುವದು.
ಹೆಚ್ಚಿನ ಮಾಹಿತಿಗಾಗಿ ಯಲ್ಲಮ್ಮಾ ಪುರಸಭೆ ಸವದತ್ತಿ ಸಿ.ಎ.ಓ ಎಸ್.ವೈ ಹಾದಿಮನಿಯವರನ್ನು ಸಂಪರ್ಕಿಸಬಹುದು. ಅಥವಾ ಕಾರ್ಯಾಲಯದ ವೆಬ್‍ಸೈಟ್ ವಿಳಾಸ www.saundattitown.mrc.gov.in ಭೇಟಿ ನೀಡುವ ಮೂಲಕ ಮಾಹಿತಿ ಪಡೆಯಬಹುದು ಎಂದು ಸವದತ್ತಿ ಯಲ್ಲಮ್ಮಾ ಪುರಸಭೆ, ಸವದತ್ತಿಯ ಮುಖ್ಯಾಧಿಕಾರಿ, .ಪಿ. ಎಂ. ಚನ್ನಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾನಾಪುರ ವ್ಯಾಪ್ತಿಯಲ್ಲಿ ಉದ್ಯೋಗಿನಿ, ಕಿರು ಸಾಲ ಯೋಜನೆಯಡಿ ಅರ್ಜಿ ಆಹ್ವಾನ
ಬೆಳಗಾವಿ,ಆ.10 (ಕರ್ನಾಟಕ ವಾರ್ತೆ): ಶಿಶು ಅಭಿವೃದ್ಧಿ ಯೋಜನೆ, ಖಾನಾಪುರ ವ್ಯಾಪ್ತಿಯಲ್ಲಿ ” ಉದ್ಯೋಗಿನಿ” ಹಾಗೂ “ಕಿರುಸಾಲ ” ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ ಮಹಿಳಾ ನಿಗಮದಿಂದ 2021-22 ನೇ ಸಾಲಿನ ಉದ್ಯೋಗಿನಿ ಯೋಜನೆಯಡಿ 18-55 ವಯೋಮಿತಿಗೆ ಒಳಪಟ್ಟು, ವರ್ಷಕ್ಕೆ ಇತರೆ ವರ್ಗದವರಿಗೆ ರೂ. 2 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಗಸ್ಟ್ 31 ರ ಒಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಖಾನಾಪುರ ಅವರ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ದೃಡಿಕರಿಸಿ ಸದರಿ ಕಚೇರಿಗೆ ಸಲ್ಲಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಜಾರಿಯಲ್ಲಿರುವ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಳಗಾವಿ,.: 2021-22 ನೇ ಸಾಲಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಜಾರಿಯಲ್ಲಿರುವ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆ ಯೋಜನೆಗಳು : ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಯೋಜನೆ, ವಿದ್ಯಾರ್ಥಿಗಳ ಶುಲ್ಕ ಮರು ಪಾವತಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ವಿಕಲಚೇತನರ ಸಾಧನ-ಸಲಕರಣೆ ಯೋಜನೆ, ವಿಕಲಚೇತನ ವ್ಯಕ್ತಿಗಳನ್ನು ಸಾಮಾನ್ಯ ವ್ಯಕ್ತಿಗಳು ವಿವಾಹವಾದಲ್ಲಿ ವಿವಾಹ ಪ್ರೋತ್ಸಾಹ ಧನ ಯೋಜನೆ, ಅಂಧ ಮಹಿಳೆಯರಿಗೆ ಜನಿಸುವ ಮಕ್ಕಳಿಗೆ ಶಿಶುಪಾಲನಾ ಭತ್ಯೆ ಯೋಜನೆ, ಎಸ್.ಎಸ್.ಎಲ್.ಸಿ. ಹಾಗೂ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪಟಾಪ್ ಯೋಜನೆ, ಆಧಾರ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಯೋಜನೆ, ಶ್ರವಣ ದೋಷವುಳ್ಳವರಿಗೆ ಹೊಲಿಗೆ ಯಂತ್ರ ಯೋಜನೆ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಮೇಲೆ ತಿಳಿಸಿರುವ ಎಲ್ಲಾ ವಿವಿಧ ಯೋಜನೆಗಳ ಅರ್ಜಿಗಳನ್ನು ಪಡೆಯಲು ವೆಬ್‍ಸೈಟ್:-ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ಇ-ಸೇವೆಗಳ ಆನ್‍ಲೈನಲ್ಲಿ ಅರ್ಜಿಗಳನ್ನು ಭರ್ತಿ ಮಾಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿಗಳ ಕಚೇರಿ ಶಿವಾಜಿ ನಗರ ಬೆಳಗಾವಿ, ಕಚೇರಿ ದೂರವಾಣಿ ಸಂಖ್ಯೆ:- 0831-2476096/7 ಹಾಗೂ ಆಯಾ ತಾಲೂಕಿನ ತಾಲೂಕು ಪಂಚಾಯತ ಕಛೇರಿಯಲ್ಲಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ದ್ವಿ ಪ್ರತಿಯಲ್ಲಿ ಮ್ಯಾನುವಲ್ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಕೊನೆಯ ಸೆ.09 ಆಗಿದ್ದು, ತಡವಾಗಿ ಬಂದಂತಹ ಅರ್ಜಿಗಳನ್ನು ಹಾಗೂ ಅಪೂರ್ಣ ಅರ್ಜಿಗಳು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲವೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////

 

 

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');