ಗ್ರಾಮದ ಅಭಿವೃದ್ದಿಯಲ್ಲಿ ಪಂಚಾಯತ್ ಅಧ್ಯಕ್ಷರ ಪಾತ್ರ ಮಹತ್ತರವಾದುದು: ಸಚಿವ ಈಶ್ವರಪ್ಪ

0
🌐 Belgaum News :

ಚಿಕ್ಕೋಡಿ: ಗ್ರಾಮದ ಅಭಿವೃದ್ದಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ಪಾತ್ರ ಮಹತ್ತರವಾಗಿದೆ. ಜನರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕ ಕೆಲಸ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಪಟ್ಟಣದ ಪದ್ಮಾ ಕಾರ್ಯಾಲಯದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜೀರಸಾಬ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಸಂಸ್ಥೆ ಮೈಸೂರು ಹಾಗೂ ಜಿಲ್ಲಾ ಪಂಚಾಯತಿ ಬೆಳಗಾವಿ ಇವರ ಸಹಯೋಗದಲ್ಲಿ ಬುಧುವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಓಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮಗಳಲ್ಲಿರುವ  ಕೆರೆಗಳನ್ನು ಅಭಿವೃದ್ಧಿ ಮಾಡಲು ಆಸಕ್ತಿ ವಹಿಸಬೇಕು. ಗಿಡ ಮರ ಬೆಳೆಸಲು ಹೆಚ್ಚಿನ ಸಂಖ್ಯೆಯಲ್ಲಿ ಸಸಿ ನೆಡಬೇಕು. ಅಂತರ್ಜಲಮಟ್ಟ ಹೆಚ್ಚಿಸಲು ನೀರು ಇಂಗಿಸುವ ಯೋಜನೆ ಅನುಷ್ಠಾನ ಮಾಡಬೇಕೆಂದು ತಿಳಿಸಿದರು.

ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೃಷಿ ಹೊಂಡ, ಬದು ನಿರ್ಮಾಣ, ಸಸಿ ನೆಡುವುದು, ಕೆರೆಗಳ ಅಭಿವೃದ್ಧಿ ಸೇರಿದಂತೆ ನರೇಗಾ ಯೋಜನೆಯಡಿ ದೇಶದಲ್ಲಿ ಕರ್ನಾಟಕ ರಾಜ್ಯ ಹೆಚ್ಚು ಕೆಲಸ ಪಡೆದುಕೊಂಡಿದೆ ಎಂದು ಹೇಳಿದರು.

ಗ್ರಾಮ ಪಂಚಾಯತ್ ಸದಸ್ಯರು ಚುನಾವಣೆ ಬಂದಾಗ ಪಕ್ಷ ರಾಜಕೀಯ ಮಾಡೋಣ. ಆದರೆ, ಚುನಾಯಿತರಾದ ಬಳಿಕ ಎಲ್ಲರೂ ಪಕ್ಷ ಬೇದ ಮರೆತು ಗ್ರಾಮದ ಅಭಿವೃದ್ಧಿಗೆ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಇದರಿಂದ ಸರ್ಕಾರದ ಯೋಜನೆ ಸಫಲವಾಗುತ್ತವೆ ಎಂದರು.

ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ:
ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಗ್ರಾಮ ಪಂಚಾಯತ್ ಅಧ್ಯಕ್ಷರು ಆಯಾ ಗ್ರಾಮಗಳ ಮುಖ್ಯಮಂತ್ರಿಯಿದ್ದ ಹಾಗೇ ತಮಗೆ ಸರ್ಕಾರ ಗ್ರಾಮದ ಅಭಿವೃದ್ಧಿಗೆ ಕೆಲಸ ಮಾಡಲು ನಿಮ್ಮ ಜೊತೆ ಇದೆ. ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಪಿಡಿಒಗಳು ಗ್ರಾಮದ ಅಭಿವೃದ್ದಿಗೆ ಮುನ್ನುಡಿ ಬರೆಯಬೇಕೆಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಮಾಹಿತಿ ಗ್ರಾಪಂ ಅಧ್ಯಕ್ಷರಿಗೆ ಕೊಡಲು ಈ ಕಾರ್ಯಾಗಾರ  ಅನುಕೂಲವಾಗಿದೆ ಎಂದರು.

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್, ಉತ್ತರ ಕನ್ನಡ ಪರಿಸರವಾದಿ ಶಿವನಾಂದ ಕಳವೆ, ಕೇರೆ ಪುನಸಚ್ಚೇತನ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರಿಕರಣ ಯೋಜನಾ ಆರೋಗ್ಯ ಸಮಿತಿ  ಉಪಾಧ್ಯಕ್ಷ  ಪ್ರಮೋದ ಹೆಗಡೆ ಮಾತನಾಡಿದರು.

ಶಾಸಕ ಗಣೇಶ ಹುಕ್ಕೇರಿ, ಮಾಜಿ ಶಾಸಕ ಸಂಜಯ ಪಾಟೀಲ ಸೇರಿ ಇನ್ನಿತರರು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ ಎಚ್.ವಿ. ಸ್ವಾಗತಿಸಿದರು. ಸಿದ್ದು ದುಪದಾಳ ನಿರೂಪಿಸಿದರು. ಉಪಕಾರ್ಯದರ್ಶಿ ಭೀಮಪ್ಪ ಲಾಳಿ ವಂದಿಸಿದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');