ಅಶ್ಲೀಲ ಚಿತ್ರ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ ಪತಿ ಜಾಮೀನು ಕಂಟಕ..!

0
🌐 Belgaum News :

ಮುಂಬೈ: ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಆಗಸ್ಟ್ 20ರವರೆಗೂ ಜಾಮೀನು ದೊರೆಯುವುದಿಲ್ಲ ತಿಳಿಸಿವೆ.

ಉದ್ಯಮಿ ರಾಜ್ ಕುಂದ್ರಾಗೆ ಬಿಡುಗಡೆ ಭಾಗ್ಯ ಸದ್ಯಕ್ಕೆ ಕಾಣುತ್ತಿಲ್ಲ. ರಾಜ್ ಕುಂದ್ರಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂಬೈ ಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದ್ದು. ಅದರಂತೆ ಆಗಸ್ಟ್ 20ರವೆರೆಗೂ ಅವರು ಬಿಡುಗಡೆಯಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಈ ಹಿಂದೆ ತಮ್ಮ ಬಂಧನವನ್ನು ಪ್ರಶ್ನಿಸಿ ಮತ್ತು ಕೂಡಲೇ ಬಿಡುಗಡೆ ಮಾಡುವಂತೆ ಕೋರಿ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಮೇಲ್ಮನವಿಯನ್ನು ತಿರಸ್ಕರಿಸಿದೆ.  ಜುಲೈ 27ರಂದು ಮುಂಬೈನ ನ್ಯಾಯಾಲಯವೊಂದು ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿತ್ತು. ಈ ಕುರಿತು ಬಾಂಬೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದ ರಾಜ್​ ಕುಂದ್ರಾ ಮತ್ತು ರಿಯಾನ್ ಥಾರ್ಪೆ, ಬಂಧನದ ಪ್ರಕ್ರಿಯೆ ಸರಿಯಾಗಿ ನಡೆದಿರಲಿಲ್ಲ ಎಂದು ಹೇಳಿ, ಬಿಡುಗಡೆಗೊಳಿಸುವಂತೆ ಕೋರಿದ್ದರು.

ಆದರೆ ಇದನ್ನು ವಿಚಾರಣೆ ನಡೆಸಿದ ನ್ಯಾಯಾಲಯವು, ಬಂಧನದ ಪ್ರಕ್ರಿಯೆಯಲ್ಲಿ ಯಾವುದೇ ದೋಷವಿಲ್ಲ. ಮತ್ತು ಸೆಷನ್ ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದೂ ಸರಿಯಾಗಿದೆ ಎಂದು ಹೇಳಿತ್ತು.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');