ಶೀಘ್ರವೇ ಸಿಎಂ ಬೊಮ್ಮಾಯಿ ಸರ್ಕಾರ ಪತನ : ಸಿದ್ದರಾಮಯ್ಯ ಭವಿಷ್ಯ

0
🌐 Belgaum News :

ಮಂಡ್ಯ :ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಹೆಚ್ಚು ದಿನ ಉಳಿಯುವುದು ಅನುಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟಾಂಪ್ ನೇತೃತ್ವದ ಸರ್ಕಾರದ ಬಗ್ಗೆ ಇನ್ನು ಮೂರು ತಿಂಗಳು ಮಾತನಾಡುವುದಿಲ್ಲ. ಬೊಮ್ಮಾಯಿ ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ನಾನೇನು ಜ್ಯೋತಿಷ್ಯ ಹೇಳುವುದಿಲ್ಲ. ಅವರಾಗಿಯೇ ಸರ್ಕಾರ ಬೀಳಿಸಲಿದ್ದಾರೆ ಎಂದರು.

ಬೊಮ್ಮಾಯಿ ಸರ್ಕಾರವನ್ನು ನಾವಂತೂ ಬೀಳಿಸುವುದಿಲ್ಲ. ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ. ಬಿಜೆಪಿ ಸರ್ಕಾರ ಪೂರ್ಣಾವಧಿ ಇರುವುದು ಅನುಮಾನ ಎಂದು ಹೇಳಿದರು.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');