ಹಿರೇಕೊಡಿ ಗ್ರಾಮದ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪಿಯುಸಿ ವಸತಿ ಸಹಿತ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

0
🌐 Belgaum News :

ಬೆಳಗಾವಿ,: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಕ್ಕೋಡಿ ತಾಲೂಕಿನ ಹಿರೇಕೊಡಿ ಗ್ರಾಮದ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ವಸತಿ ಕಾಲೇಜು, ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2021-22ನೇ ಸಾಲಿನ ಪ್ರಥಮ ವರ್ಷದ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ತಲಾ 60 ಸೀಟುಗಳ ವಸತಿ ಸಹಿತ ಉಚಿತ ಪ್ರವೇಶಕ್ಕಾಗಿ 10ನೇ ತರಗತಿ ಪಾಸಾದ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರೈಸ್ತ್, ಪಾರ್ಸಿ, ಬೌದ್ಧ ಮತ್ತು ಸಿಖ್) ಹಾಗೂ ಇತರೆ ವರ್ಗದ ಬಾಲಕಿಯರಿಂದ (75:25 ಅನುಪಾತದಲ್ಲಿ) ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಬಾಲಕಿಯರು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಗಸ್ಟ್ 25 ರ ಒಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಅರ್ಜಿ ದೊರೆಯುವ ಸ್ಥಳ : ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ವಸತಿ ಕಾಲೇಜು, ಹಿರೇಕೊಡಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯಾಲಯ, ರಾಮತೀರ್ಥ ನಗರ ಬೆಳಗಾವಿ, ಜಿಲ್ಲಾ/ತಾಲ್ಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0831-2950348, 9480203432, 8880559790 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಡಾ. ಅಬ್ದುಲ್ ರಶೀದ ಎಮ್ ಮಿರ್ಜನ್ನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');