75 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಶಾಲಾ, ಕಾಲೇಜುಗಳಲ್ಲಿ ಭಿತ್ತಿಚಿತ್ರ ಸ್ಪರ್ಧೆ

0
🌐 Belgaum News :

ಬೆಳಗಾವಿ,: 75 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ಶಾಲಾ, ಕಾಲೇಜುಗಳಲ್ಲಿ ಭಿತ್ತಿಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಬೆಂಗಳೂರು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನಷನ್ ಸೊಸೈಟಿ ಹಾಗೂ ಬೆಳಗಾವಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಇವರು ವಿದ್ಯಾರ್ಥಿನಿಯರಲ್ಲಿ ಹೆಚ್‍ಐವಿ / ಏಡ್ಸ್, ಟಿ. ಬಿ. ಹಾಗೂ ರಕ್ತದಾನದ ಬಗ್ಗೆ ಅರಿವು ಮೂಡಿಸುವ ಕುರಿತು ಭಿತ್ತಿಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯ ಮುಖ್ಯ ಉದ್ದೇಶ ಯುವಜನತೆಯ ಮಾನಸಿಕ, ದೈಹಿಕ, ಸನ್ನಡತೆಯ ಅಭಿವೃದ್ಧಿಗಾಗಿ ಬಹಳ ಮುಖ್ಯವಾಗಿರುತ್ತದೆ.
ಸದರಿ ಕಾರ್ಯಕ್ರಮವನ್ನು 5 ಸರ್ಕಾರಿ ಪ್ರೌಢಶಾಲೆ/ ಪದವಿ ಪೂರ್ವ ಮಹಾವಿದ್ಯಾಲಯ, ಮತ್ತು 5 ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಲ್ಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸದರಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ – 3000, ದ್ವಿತೀಯ ಬಹುಮಾನ – 2500, ತೃತೀಯ ಬಹುಮಾನ- 1500 ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು, ಜಿಲ್ಲಾ ಏಡ್ಸ್ ನಿರೋದಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಆಯುಷ್ ಆಸ್ಪತ್ರೆ ಹತ್ತಿರ, ಮಂಡೋಳಿ ರಸ್ತೆ, ಬೆಳಗಾವಿ – 590006, ಪೆÇೀನ್ ನಂ: 0831-2950074 ಗೆ ಸಂಪರ್ಕಿಸಿ ಎಂದು ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');