ದಿಢೀರ್ ಕುಸಿದು ಬಿದ್ದು ಮೃತಪಟ್ಟ ಪೊಲೀಸ್ ಕಾನ್ ಸ್ಟೇಬಲ್ : ಮಾಜಿ ಸೈನಿಕರು, ಪೊಲೀಸರಿಂದ ಪ್ರತಿಭಟನೆ

0
🌐 Belgaum News :

ರಾಮನಗರ : ತರಬೇತಿ ಪಡೆಯುತ್ತಿದ್ದ ಪೊಲೀಸ್ ಕಾನ್ ಸ್ಟೆಬಲ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ ಎನ್ನಲಾಗುತ್ತಿದ್ದು, ಬುಧವಾರ ತಡರಾತ್ರಿ ತರಬೇತಿ ಪೊಲೀಸ್ ಪೇದೆಗಳು ಪ್ರತಿಭಟನೆ ನಡೆಸಿದ್ದಾರೆ.

ಮೂಲತಃ ಗದಗ ಜಿಲ್ಲೆ ನರಗುಂದ ತಾಲೂಕಿನವರಾದ ಯಲ್ಲಪ್ಪ, ಎರಡೂವರೆ ತಿಂಗಳಿನಿಂದ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ವಂದರಾಗುಪ್ಪೆ ಗ್ರಾಮದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದರು. ಇಲ್ಲಿ ದಿಢೀರ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

“ಸೈನಿಕನಾಗಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದ ನಂತರ ಯಲ್ಲಪ್ಪ, ಪೊಲೀಸ್ ತರಬೇತಿ ಪಡೆಯುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಪೊಲೀಸ್ ತರಬೇತಿ ಶಾಲೆಯ ಅಧಿಕಾರಿಗಳು ಸೂಕ್ತ ಚಿಕಿತ್ಸೆ ಕೊಡಿಸಲಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಘಟನೆಯನ್ನು ಖಂಡಿಸಿ ಉಳಿದ ಪೇದೆಗಳು ಪಿಟಿಎಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ,” ಒತ್ತಾಯ ಮಾಡಿದ್ದಾರೆ.

ಅಧಿಕಾರಿ ಅಮಾನತ್ತಿಗೆ ಆಗ್ರಹ: ಮಾಜಿ ಸೈನಿಕ ಎಲ್ಲಪ್ಪ ಸಾವಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸೈನಿಕರ ಸಂಘ, ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿ ಆಮಾನತ್ತಿಗೆ ಆಗ್ರಹಿಸಿ ಪೊಲೀಸ್ ತರಬೇತಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು‌.

ಮೃತ ಪೊಲೀಸ್ ಕಾನ್‌ಸ್ಟೆಬಲ್ ಎಲ್ಲಪ್ಪ ನೋವಿನಿಂದ ಎರಡು ಗಂಟೆ ನರಳಾಡಿದರೂ, ಅಧಿಕಾರಿಗಳು ಚಿಕಿತ್ಸೆ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಮಾಜಿ ಸೈನಿಕರ ಸಂಘ ಸದಸ್ಯರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');