ಹುಲಿ ದಾಳಿ : ನಾಲ್ಕು ಜಾನುವಾರುಗಳು ಬಲಿ

0
🌐 Belgaum News :

ಕೊಡಗು: ಹುಲಿ ದಾಳಿಗೆ ನಾಲ್ಕು ಜಾನುವಾರುಗಳು ಬಲಿಯಾಗಿರುವ ಘಟನೆ ಹಮ್ಮಿಯಾಲ ಗ್ರಾಮದಲ್ಲಿ ನಡೆದಿದೆ.

ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಮ್ಮಿಯಾಲ ಗ್ರಾಮದ ಮೊಣ್ಣಂಡ. ಕೆ. ಶಿವಯ್ಯ ಅವರಿಗೆ ಸೇರಿದ ಗಬ್ಬದ ಎಮ್ಮೆ, ಕೋಣ, ಹಸು ಸೇರಿದಂತೆ ನಾಲ್ಕು ಜಾನುವಾರು ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಸತ್ತ ಜಾನುವಾರುಗಳ ಮೊತ್ತ 1.50 ಲಕ್ಷದಿಂದ 2 ಲಕ್ಷ ರೂ.ಗಳಾಗಬಹುದೆಂದು ಅಂದಾಜಿಸಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಗಣೇಶ್ ಮತ್ತು ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾನುವಾರುಗಳನ್ನು ಕಳೆದುಕೊಂಡ ಕುಟುಂಬದವರ ಕಣ್ಣೀರು ಕಂಡು ದಂಗಾದ ಗ್ರಾಮಸ್ಥರು ಹಾಗೂ ಅರಣ್ಯ ಸಿಬ್ಬಂದಿಗಳು ಅವರನ್ನು ಸಮಾಧಾನಪಡಿಸಿದರು. ನಂತರ ಮಾತನಾಡಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸೂಕ್ತ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');