ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ಶಾಸಕ

0
🌐 Belgaum News :

ಬೆಂಗಳೂರು :  ಅತಿವೃಷ್ಟಿ ತಾಲ್ಲೂಕುಗಳ ಪಟ್ಟಿಯಲ್ಲಿ ಮೂಡಿಗೆರೆಯನ್ನು ಕೈಬಿಟ್ಟಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಸ್ವತಃ ಆಡಳಿತ ಪಕ್ಷದ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ರಾಜಕೀಯ ಕಾರಣಕ್ಕೆ ಮೂಡಿಗೆರೆ ತಾಲೂಕನ್ನು ಅತಿವೃಷ್ಟಿ ತಾಲೂಕುಗಳ ಪಟ್ಟಿಯಲ್ಲಿ ಕೈಬಿಡಲಾಗಿದೆ. ಅತಿವೃಷ್ಟಿ ತಾಲೂಕು ಘೋಷಣೆಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನ ಕರೆಸಿ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸ್ಥಾನ ನೀಡಲಾಗುತ್ತಿಲ್ಲ. ಸರ್ಕಾರಕ್ಕೆ ನನ್ನ ಬೆಂಬಲವನ್ನು ಕೋರಿದರು. ಹಾಗೆ ನನ್ನ ಕ್ಷೇತ್ರಕ್ಕೆ ಹಾಗೂ ಚಿಕ್ಕಮಗಳೂರು ಜಿಲ್ಲೆ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುವುದಾಗಿ ಹೇಳಿದ್ದರು. ಆದರೆ ಅತಿವೃಷ್ಟಿ ತಾಲೂಕುಗಳ ಪಟ್ಟಿಯಲ್ಲಿ ಮೂಡಿಗೆರೆ ತಾಲೂಕನ್ನು ಕೈಬಿಟ್ಟಿರುವುದು ಬೇಸರವಾಗಿದೆ ಎಂದು ಹೇಳಿದ್ದಾರೆ.

ಸ್ವತಃ ಆಡಳಿತ ಪಕ್ಷದ ವಿರುದ್ಧವೇ ಪ್ರತಿಭಟನೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ. ಈಗ ಬಿಜೆಪಿ ಪಕ್ಷದಲ್ಲಿ ಶಾಸಕರು, ಸಚಿವ ಅಸಮಾಧಾನಗೊಂಡವ ಪಟ್ಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');