ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ್ದು ಬಿಜೆಪಿಯವರೇ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

0
🌐 Belgaum News :

ಮೈಸೂರು : ಬೆಂಗಳೂರಿನ ಹೊಂಗಸಂದ್ರದಲ್ಲಿನ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದಂತ 2 ಕಾರುಗಳಿಗೆ ಬೆಂಕಿ ಹಚ್ಚಿದ್ದೇ ಬಿಜೆಪಿಯವರೇ. ಈ ಬಗ್ಗೆ ಪೊಲೀಸರು ತನಿಖೆ ಮೂಲಕ ಬಹಿರಂಗ ಪಡಿಸಲಿ ಎಂದು  ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಶಾಸಕ ಸತೀಶ್ ರೆಡ್ಡಿ, ಬೆಂಗಳೂರಿನಲ್ಲಿ ಬ್ಲಾಕ್ ದಂಧೆ ಮಾಡುತ್ತಿದ್ದವನು. ಇದನ್ನು ಬಯಲು ಮಾಡಿದ್ದು ಬಿಜೆಪಿಯವೇ ಆಗಿದ್ದಾರೆ. ಆ ಬಳಿಕ ನಾಟಕ ಮಾಡಿದ್ದರು. ಹಾಗೆಯೇ ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದು ಬಿಜೆಪಿಯವರೇ ಎಂಬುದಾಗಿ ಹೇಳಿದರು.

ಸಿಟಿ ರವಿ ಒಬ್ಬ ಕೊಲೆಗಡುಕ. 2019ರಲ್ಲಿ ಕುಣಿಗಲ್ ಹತ್ತಿರ ಮದ್ಯಸೇವನೆ ಮಾಡಿ ಕಾರು ಚಲಾಯಿಸಿ, ಇಬ್ಬರ ಸಾವಿಗೆ ಕಾರಣನಾಗಿದ್ದಾನೆ. ಇಂತಹ ವ್ಯಕ್ತಿಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವಂತ ಯೋಗ್ಯತೆ ಇಲ್ಲ. ಹೀಗೆ ಮಾತನಾಡಿದ್ರೇ.. ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸೋದಾಗಿ ಎಚ್ಚರಿಕೆ ನೀಡಿದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');