ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಅಧಿಕಾರ ಸ್ವೀಕಾರ !

0
🌐 Belgaum News :

ಬೆಂಗಳೂರು : ಕಳೆದ ಏಳು ತಿಂಗಳ ಹಿಂದೆ ನಡೆದ ಚುನಾವಣೆಯಲ್ಲಿ ಯುವ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದ ರಕ್ಷಾ ರಾಮಯ್ಯ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಯುವ ಕಾಂಗ್ರೆಸ್ ಉಸ್ತುವಾರಿ ನಾಯಕ ಕೃಷ್ಣ ಅಲಾವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಮೊಹಮ್ಮದ್, ಧ್ರುವನಾರಾಯಣ್, ಮಾಜಿ ಸಚಿವರಾದ ಎಂ.ಆರ್.ಸೀತಾರಾಮ್, ಆಂಜನೇಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಸೇರಿದಂತೆ ಅನೇಕರ ಸಮ್ಮುಖದಲ್ಲಿ ರಕ್ಷಾ ರಾಮಯ್ಯ ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಯುವ ಕಾಂಗ್ರೆಸ್‍ನ ಕಾರ್ಯಕರ್ತರು 9 ಸಾವಿರ ಜನರಿಗೆ ಬೆಡ್ ಒದಗಿಸಿದ್ದಾರೆ. ಎರಡೂವರೆ ಲಕ್ಷ ಆಹಾರ ಕಿಟ್ ವಿತರಣೆ, 500 ಠಾಣೆಗಳಲ್ಲಿ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಕಾರ್ಯಕ್ರಮ ಮಾಡಿದ್ದಾರೆ. 8 ಸಾವಿರ ಮಂದಿಗೆ ಆಯಂಬುಲೆನ್ಸ್ ಸೇವೆ ಒದಗಿಸಿದ್ದಾರೆ ಎಂದು ವಿವರಿಸಿದರು.

ದೇಶದಲ್ಲಿ ಮೋದಿ ಅಲೆ ಇದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅಲೆ ಇರುವುದಂತೂ ನಿಜ. ಆದರೆ ಅದು ಮೋದಿಯದಲ್ಲ. ದ್ವೇಷ ಮತ್ತು ದುರಾಡಳಿತದ ಅಲೆಯಿದೆ. ಪ್ರಧಾನಿಯವರು ತನಿಖಾ ಸಂಸ್ಥೆಗಳನ್ನು ಖಾಸಗಿ ಆಸ್ತಿ ಎಂಬಂತೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಡಿ.ಕೆ.ಶಿವಕುಮಾರ್ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಯಾವುದೇ ಹೋರಾಟ ಮಾಡದ ಬಿಜೆಪಿಯವರು ದೇಶ ಭಕ್ತಿಯ ಬಗ್ಗೆ ಮಾತನಾಡುತ್ತಾರೆ. ದೇಶದ ಇತಿಹಾಸ ಕಟ್ಟಿದ ನಾವು ಕಾಂಗ್ರೆಸಿಗರು ಎಂದು ಹೇಳಿಕೊಳ್ಳಲು ಹೆಮ್ಮೆಪಡಬೇಕು ಎಂದರು.

ಕೆಳಹಂತದಿಂದ ಹೋರಾಟದ ಮೂಲಕ ಬಂದವರಿಗೆ ಪಕ್ಷದಲ್ಲಿ ಉನ್ನತ ಸ್ಥಾನ ಸಿಗುತ್ತಿದೆ. ಬಿ.ವಿ.ಶ್ರೀನಿವಾಸ್ ಜಾತಿ, ಹಣ ಯಾವುದೇ ಹಿನ್ನೆಲೆ ಇಲ್ಲದೆ ಇದ್ದು, ಸ್ವಂತ ಪರಿಶ್ರಮದ ಮೂಲಕ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೊಡಬೇಕೆಂದು ಪ್ರಸ್ತಾವನೆ ಬಂದಾಗ ನಾನು ಮೊದಲು ಪಕ್ಷ ಕಟ್ಟುತ್ತೇನೆ. ಅಧಿಕಾರ ನಂತರ ಎಂದು ಅವಕಾಶವನ್ನು ನಿರಾಕರಿಸಿದರು ಎಂದು ಹೇಳಿದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');