ಆಗಸ್ಟ್ 20 ದಿ. ದೇವರಾಜ ಅರಸು ಜಯಂತಿ; ಸರಳ ಆಚರಣೆ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

0
🌐 Belgaum News :

ಬೆಳಗಾವಿ,: ಕೋವಿಡ್-19 ವೈರಾಣು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸು ಜಯಂತಿಯನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ (ಆ.13) ನಡೆದ ಡಿ.ದೇವರಾಜ ಅರಸು 106 ನೇ ಜಯಂತ್ಯೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಬೆಳಗಾವಿಯು ಗಡಿ ಭಾಗದ ಜಿಲ್ಲೆಯಾಗಿರುವುದರಿಂದ ಕೋವಿಡ್-19 ವೈರಾಣು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಆಗಸ್ಟ್ 20 ರಂದು ಡಿ.ದೇವರಾಜ ಅರಸು ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಸಾಂಕೇತಿಕವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಕೋವಿಡ್ ಸಂದರ್ಭದಲ್ಲಿ ಹೆಚ್ಚು ಜನ ಸೇರುವುದನ್ನು ತಡೆಯಲು ಜಿಲ್ಲಾ ಮಟ್ಟದ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿಯನ್ನು ಆಚರಿಸಬೇಕು ಎಂದು ಅವರು ತಿಳಿಸಿದರು.
ದೇವರಾಜ ಅರಸು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನಡೆಸಿದವರು 1974 ರಲ್ಲಿ ಭೂ ಸುಧಾರಣೆ ಕಾನೂನು ಜಾರಿಗೆ ತಂದು ಉಳುವವನೇ ಭೂಮಿಯ ಒಡೆಯ ಭೂ ಸುಧಾರಣಾ ಮಂಡಳಿ ಸ್ಥಾಪಿಸಿ ರಾಷ್ಟ್ರದಲ್ಲಿ ಕ್ರಾಂತಿಕಾರಿ ಕೆಲಸ ಡಿ ದೇವರಾಜ ಅರಸು ಮಾಡಿದ್ದಾರೆ ಎಂದು ಹೇಳಿದರು.
1977 ರಲ್ಲಿ ಹಾವನೂರು ವರದಿಯನ್ನು ಜಾರಿ ಮಾಡಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡ 55 ರಷ್ಟು ಮೀಸಲಾತಿಯನ್ನು ಹಿಂದುಳಿದ ವರ್ಗದವರಿಗೆ ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಗೌರಿ ಶಂಕರ ಕಡೇಚುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');