ಆಜಾದಿ ಕಾ ಅಮೃತ ಮಹೋತ್ಸವ: ಶ್ರಮದಾನ ಹಾಗೂ ಆರೋಗ್ಯ ತಿಳುವಳಿಕೆ ಕಾರ್ಯಕ್ರಮ

0
🌐 Belgaum News :

ಬೆಳಗಾವಿ,ಆ.13: ಸ್ವಾತಂತ್ರೋತ್ಸವದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಆದೇಶ ಮೇರೆಗೆ ಶುಕ್ರವಾರ (ಆ.13)ರಂದು ಬೆಳಿಗ್ಗೆ 11 ಗಂಟೆಗೆ ಶ್ರಮದಾನ ಕಾರ್ಯಕ್ರಮ ಹಾಗೂ ಆರೋಗ್ಯ ತಿಳುವಳಿಕೆ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಉಗಾರಖುರ್ದ ಪಟ್ಟಣದ ವ್ಯಾಪ್ತಿಯಲ್ಲಿ ಹಾಗೂ ಡಾ|| ಬಿ. ಆರ್. ಅಂಬೇಡ್ಕರ ವೃತ್ತ, ಪರಸಪ್ಪಾ ಕಾರ್ನರ್, ಚನ್ನಮ್ಮ ವೃತ್ತ, ಬಸವನಗರ (ಪರಿಶಿಷ್ಟ ಜಾತಿ/ಪಂಗಡ) ಕಾಲನಿ ವ್ಯಾಪ್ತಿಯಲ್ಲಿ ಶ್ರಮದಾನ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾಗವಾಡದ ತಹಶೀಲ್ದಾರರು, ಪುರಸಭೆ ಮುಖ್ಯಾಧಿಕಾರಿಗಳು , ಅಧಿಕಾರಿ/ಸಿಬ್ಬಂದಿಗಳು , ಜನಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');