ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳ ಆರಂಭ; ಮುಖ್ಯಮಂತ್ರಿ ಬೊಮ್ಮಾಯಿ

0
🌐 Belgaum News :

ಬೆಂಗಳೂರು: ಯಾವ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆ ಇದೆಯೋ, ಆ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರ ಈ ಮೂಲಕ ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳ ಸಂಖ್ಯೆ ವರದಿಯಾದಂತ ಶಾಲೆಗಳನ್ನು ಕ್ಲೋಸ್ ಮಾಡಿ, ಮುಂಜಾಗ್ರಾತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಈ ಕುರಿತಂತೆ ಇಂದು ಕೋವಿಡ್ ಉಸ್ತುವಾರಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿರ್ವಣೆಯ ತಜ್ಞರ ಸಮಿತಿ, ಉಸ್ತುವಾರಿ ಸಚಿವರು ಮತ್ತು ಎಲ್ಲಾ ಅಧಿಕಾರಿಗಳ ಜೊತೆಗೆ ಸುಧೀರ್ಘವಾಗಿ ಚರ್ಚಿಸಿ, ತಜ್ಞರ ಸಮಿತಿಯು ಬಹಳ ವೈಜ್ಞಾನಿಕವಾದಂತ ಅಂಕಿ ಅಂಶಗಳ ಸಮೇತವಾಗಿ ಮತ್ತು ಅಂತರಾಷ್ಟ್ರೀಯ, ರಾಷ್ಟ್ರೀಯ ಟ್ರೆಂಡ್ ಬಗ್ಗೆ, ಅದಲ್ಲದೇ ನೆರೆಯ ಕೇರಳ, ಮಹಾರಾಷ್ಟ್ರ ಕೋವಿಡ್ ಸ್ಥಿತಿಗತಿಗಳ ಬಗ್ಗೆ ತಿಳಿಸಿದ್ದಾರೆ. ನಮ್ಮ ಮುಂದಿರುವಂತದ್ದು ಕೋವಿಡ್ ಅನ್ನು ಯಾವ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂಬುದಾಗಿದೆ ಎಂದರು.

ಕೋವಿಡ್ 2ನೇ ಅಲೆ ಪೂರ್ಣ ಪ್ರಮಾಣದಲ್ಲಿ ಹೋಗಿಲ್ಲ. ಈಗ ಅಲೆ ಕಡಿಮೆಯಾದ್ರೂ ಕೂಡ 1400, 1800ರವರೆಗೆ ಪ್ರಕರಣಗಳು ವರಿದಿಯಾಗುತ್ತಿವೆ. ಹೀಗಾಗಿ ಇದನ್ನು ಜಾಗೃತವಾಗಿ ನೋಡಬೇಕಿದೆ. ಎರಡನೇಯದಾಗಿ ಶಾಲೆಗಳ ಆರಂಭದ ಬಗ್ಗೆಯೂ ಚರ್ಚಿಸಲಾಗಿದೆ. ಯಾವ ಜಿಲ್ಲೆಯಲ್ಲಿ ಶಾಲೆ ಆರಂಭ ಕುರಿತಂತೆಯೂ ಚರ್ಚೆ ನಡೆಸಲಾಗಿದೆ. ಯಾವ ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಿದೆ ಅಲ್ಲಿ ಶಾಲೆ ಆರಂಭಿಸೋದು ಬೇಡ. ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇದೆ ಅಲ್ಲಿ ಶಾಲೆಗಳನ್ನು ಆರಂಭಿಸೋ ಬಗ್ಗೆಯೂ ಚರ್ಚಿಸಲಾಗಿದೆ ಎಂದರು.

ಶಾಲೆಗಳ ಆರಂಭಕ್ಕೂ ಮುನ್ನ ಪೋಷಕರು, ಶಿಕ್ಷಕರಿಗೆ ಕೊರೊನಾ ವ್ಯಾಕ್ಸಿನ್ ನೀಡಬೇಕು. ಶಾಲೆ ಆರಂಭವಾದ ನಂತರರ ಕೋವಿಡ್ ಕೇಸ್ ಹೆಚ್ಚಾದ್ರೇ ಆ ಶಾಲೆಗಳನ್ನು ಕ್ಲೋಸ್ ಮಾಡಿ ಆನಂತರ ಆರಂಭಿಸೋ ಬಗ್ಗೆಯೂ ಚರ್ಚಿಸಲಾಯಿತು. ಇದಲ್ಲದೇ ಜಿಲ್ಲಾವಾರು ಕೋವಿಡ್ ನಿರ್ವಹಣೆ ಕುರಿತಂತೆಯೂ ಚರ್ಚಿಸಲಾಗಿದೆ. ಜಿಲ್ಲಾಾವರು ಕೋವಿಡ್ ನಿಯಂತ್ರಣದ ಬಗ್ಗೆ ಆ ಜಿಲ್ಲೆಯಲ್ಲೇ ನಿರ್ವಹಣಾ ತಜ್ಞರ ಸಮಿತಿಯನ್ನು ರಚಿಸುವಂತ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

9 ಜಿಲ್ಲೆಗಳಲ್ಲಿ ಹೆಚ್ಚಿನ ಪಾಸಿಟಿವಿಟಿ ದರ:

ಈ ಪ್ರಕಾರವಾಗಿ ದಕ್ಷಿಣ ಕನ್ನಡ, ಮೈಸೂರು, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಾಮರಾಜನಗರ ಈ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಟೆಸ್ಟಿಂಗ್, ವ್ಯಾಕ್ಸಿನ್ ಹೆಚ್ಚಿಸಲಾಗುತ್ತದೆ. ಗಡಿ ಜಿಲ್ಲೆಗಳಲ್ಲಿನ ಹಳ್ಳಿಗಳಲ್ಲಿನ 10 ಕಿಲೋಮೀಟರ್ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮಗಳಲ್ಲಿಯೂ ಸಂಪೂರ್ಣ ಕೊರೋನಾ ಪರೀಕ್ಷೆ ಮಾಡುವಂತ ಕ್ರಮದ ಸೂಚನೆ ನೀಡಿದ್ದಾರೆ ಎಂದರು.

ರಾಯಚೂರು, ಬಳ್ಳಾರಿ, ಗುಲ್ಬರ್ಗ, ವಿಜಯಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೋನಾ ಪರೀಕ್ಷೆಗಳನ್ನು ಹೆಚ್ಚು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಜಿನೋಮಿಕ್ ಲ್ಯಾಪ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುತ್ತಿದೆ. 6 ಲ್ಯಾಬ್ ಗಳನ್ನು ಬೆಂಗಳೂರು, ಮೈಸೂರು, ಗುಲ್ಬರ್ಗ ಸೇರಿದಂತೆ 6 ಜಿಲ್ಲೆಗಳಲ್ಲಿ ಮುಂದಿನ 3 ವಾರಗಳಲ್ಲೇ ಸ್ಥಾಪಿಸಲಾಗುತ್ತದೆ ಎಂದು ಹೇಳಿದರು.

ನಮ್ಮ ಹತ್ತಿರ ಈಗ ಸುಮಾರು 4 ಕೋಟಿಯಷ್ಟು ಲಸಿಕಾಕರಣ ಮಾಡಲಾಗಿದೆ. 14,89 ಸಾವಿರ ಲಸಿಕೆ ಇದೆ. ಇನ್ನೂ ಸುಮಾರು 30 ಲಕ್ಷ ಈ ತಿಂಗಳ ಕೊನೆಗೆ ಬರಲಿದೆ. ಆ ಬಗ್ಗೆ ಕೇಂದ್ರದ ಆರೋಗ್ಯ ಸಚಿವರನ್ನು ಭೇಟಿಯಾಗಿ ಕೇಳಿಕೊಳ್ಳಲಾಗುತ್ತದೆ. ಅದು ಬಂದ್ರೇ ಎಲ್ಲಾ ಜಿಲ್ಲೆಗಳಲ್ಲಿ ಲಸಿಕಾಕರಣ ಮಾಡಲಾಗುತ್ತದೆ ಎಂದರು.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮಕ್ಕಳಿಗೆ ಮಾರಕವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ನಾವು ಬಿಬಿಎಂಪಿ ಕಮೀಷನರ್ ಗೆ ಎಲ್ಲಾ ಅಧಿಕಾರವನ್ನು ಕೊಟ್ಟಿದ್ದೇವೆ. ಬ್ಲಡ್ ಬ್ಯಾಂಕ್ ಸೇರಿದಂತೆ ಮಕ್ಕಳ ಐಸಿಯು ಬೆಡ್ ಗಳ ವ್ಯವಸ್ಥೆಗೂ ಕ್ರಮ ಕೈಗೊಳ್ಳಲಾಗಿದೆ. ಶೇ.2ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಬಂದ್ರೇ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಕಮೀಷನರ್ ಗೆ ಸೂಚಿಸಲಾಗಿದೆ ಎಂದು ತಿಳಿಸಿದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');