ಬೆಳಗಾವಿ ಸೇರಿ ಎಂಟು ಜಿಲ್ಲೆಗಳಲ್ಲಿ ಈ ಹಿಂದಿನ ನಿಯಮಗಳೇ ಮುಂದುವರಿಕೆ; ಸಿಎಂ ಬೊಮ್ಮಾಯಿ ಘೋಷಣೆ

0
🌐 Belgaum News :

ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚಿರುವ ಎಂಟು ಜಿಲ್ಲೆಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಮುಂದುವರೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ತಜ್ಞರು ಹಾಗೂ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಸದ್ಯಕ್ಕೆ ಲಾಕ್ ಡೌನ್ ಅಥವಾ ಯಾವುದೇ ಹೊಸ ನಿಯಮಗಳ ಜಾರಿ ಬೇಡ, ಅಗತ್ಯ ಬಿದ್ದರೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸೋಣ ಎಂದು ಹೇಳಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಅವರು, ಗಡಿ ಜಿಲ್ಲೆಗಳಾದ ಬೆಳಗಾವಿ, ದಕ್ಷಿಣ ಕನ್ನಡ, ಕಲಬುರ್ಗಿ, ಮೈಸೂರು, ಚಾಮರಾಜನಗರ, ಕೊಡಗು, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮುಂದಿನ ಎರಡು ವಾರಗಳವರೆಗೆ ವೀಕೆಂಡ್ ಕರ್ಫ್ಯೂ ಮುಂದುವರೆಯಲಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.

ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಈಗಾಗಲೇ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿತ್ತು. ಅದೇ ನಿಯಮಗಳನ್ನು ಮುಂದಿನ ದಿನಗಳಿಗೂ ಮುಂದುವರೆಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ.//////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');