ಬೆಳಗಾವಿ : ಸ್ವಾತಂತ್ರ್ಯ ಹೋರಾಟಗಾರ ಗಂಗಪ್ಪಾ ಮಾಳಗಿ ಅವರಿಗೆ ಸನ್ಮಾನ

0
🌐 Belgaum News :

ಬೆಳಗಾವಿ : 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹುದಲಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಗಂಗಪ್ಪಾ ಮಾಳಗಿ ಅವರಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ  ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಿದರು.

ಬಳಿಕ ವಿನಯ ನಾವಲಗಟ್ಟಿ ಮಾತನಾಡಿ, ಸ್ವಾತಂತ್ರ್ಯ ಚಿಕ್ಕು 75 ವರ್ಷಗಳು ಗತಿಸಿವೆ. ಅನೇಕ ಮಹಾ ನಾಯಕರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಇಂದಿನ ಯುವಕರಿಗೆ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿ ಕೊಡುವ ಪ್ರಯತ್ನವಾಗಬೇಕಿದೆ ಎಂದರು.

ಸ್ವಾತಂತ್ರ್ಯ ಎಂದರೆ ಸ್ವಾಭಿಮಾನ. ತಮ್ಮ ಬದುಕನ್ನು ಪಣಕ್ಕಿಟ್ಟು ದೇಶಕ್ಕೆ ಇಂತಹ ಸ್ವಾಭಿಮಾನವನ್ನು ತಂದುಕೊಟ್ಟ ಮಹನೀಯರನ್ನು ಇಂದು ನಾವೆಲ್ಲರೂ ಹೆಮ್ಮೆಯಿಂದ ಸ್ಮರಿಸಬೇಕು. ನಮ್ಮ ಪೂರ್ವಜರ ತ್ಯಾಗ, ಬಲಿದಾನ, ಆತ್ಮಾರ್ಪಣೆಯ ಪ್ರತಿಫಲದಿಂದ ನಾವಿಂದು ಸ್ವತಂತ್ರ ಭಾರತದಲ್ಲಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ.ಎಂ.ಜೆ.,  ರಾಜೇಂದ್ರ ಪಾಟೀಲ, ಸಿದ್ದು ಸುಣಗಾರ, ಉಮೇಶ್ ಬಾಳಿ, ಅರವಿಂದ್ ಕಾರಚಿ, ಶಕಿಲಾ ಮುಲ್ಲಾ, ಅಂಜಲಿ ಪಾಟೀಲ, ತ್ರೀವಿಣಿ ಮಠಪತಿ, ಜಗದೀಶ್.ಎಸ್., ವಿಜಯ ಹುಂಚಿನಾಳ ಸೇರಿದಂತೆ ಇತರರು ಇದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');